ಜಿಬಿಎ ವ್ಯಾಪ್ತಿಯಲ್ಲಿ ಪಿಒಪಿ ಗಣೇಶ ಮೂರ್ತಿಗಳಿಗೆ ನಿಷೇಧ
ಬೆಂಗಳೂರು, 11 ಆಗಸ್ಟ್ (ಹಿ.ಸ.): ಆ್ಯಂಕರ್:ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಬಳಕೆ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಮಾಲಿನ್ಯ ತಡೆಗಟ್ಟುವ ಉದ್ದೇಶದಿ
Pop ban


ಬೆಂಗಳೂರು, 11 ಆಗಸ್ಟ್ (ಹಿ.ಸ.):

ಆ್ಯಂಕರ್:ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಬಳಕೆ, ಮಾರಾಟ ಹಾಗೂ ವಿಸರ್ಜನೆಯನ್ನು ನಿಷೇಧಿಸಲಾಗಿದೆ.

ಪರಿಸರ ಸಂರಕ್ಷಣೆ ಹಾಗೂ ಜಲಮೂಲಗಳ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸುವಂತೆ ಜಿಬಿಎ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಆಯ್ಕೆ ಮಾಡಿಕೊಂಡು ಪೂಜಿಸುವಂತೆ ಹಾಗೂ ರಾಸಾಯನಿಕ ಬಣ್ಣ ಬಳಿದಿರುವ ಮೂರ್ತಿಗಳನ್ನು ಬಳಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪಿಒಪಿ ಮೂರ್ತಿಗಳ ವಿಸರ್ಜನೆಯಿಂದ ನದಿಗಳು, ಕೆರೆಗಳು, ಬಾವಿಗಳು ಸೇರಿದಂತೆ ಜಲಮೂಲಗಳು ಮಾಲಿನ್ಯಗೊಳ್ಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರಿಸರ ಸ್ನೇಹಿ ಆಚರಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.

ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಜಲಮೂಲಗಳ ಸಂರಕ್ಷಣೆಗೆ ಸಹಕಾರಿ. ಮುಂದಿನ ಪೀಳಿಗೆಗಾಗಿ ಜಲಮೂಲಗಳು ಹಾಗೂ ಪರಿಸರವನ್ನು ಸಂರಕ್ಷಿಸಲು ಎಲ್ಲರೂ ಸಹಕರಿಸುವಂತೆ ಜಿಬಿಎ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande