ಮನಮೋಹನ್ ಸಿಂಗ್ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ: ಸೋನಿಯಾ ಗಾಂಧಿ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಅವರ ವಿರುದ್ಧ ಮಾಡಲಾಗಿದ್ದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದವು ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಆಂಗ್ಲ ಪತ್ರಿಕೆಯಲ್ಲಿ ಪ್ರಕಟಿಸಿರುವ ಲೇಖನದಲ್ಲಿ
सोनिया गांधी ने मिशेल बेचेलेट को इंदिरा गांधी शांति, निरस्त्रीकरण और विकास पुरस्कार दिया


ನವದೆಹಲಿ, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಅವರ ವಿರುದ್ಧ ಮಾಡಲಾಗಿದ್ದ ಆರೋಪಗಳು ರಾಜಕೀಯ ಪ್ರೇರಿತವಾಗಿದ್ದವು ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಆಂಗ್ಲ ಪತ್ರಿಕೆಯಲ್ಲಿ ಪ್ರಕಟಿಸಿರುವ ಲೇಖನದಲ್ಲಿ ಮನಮೋಹನ್ ಸಿಂಗ್ ಅವರ ಪ್ರಧಾನಮಂತ್ರಿಯಾಗಿದ್ದ ಅವಧಿಯ ಆರ್ಥಿಕ ನೀತಿಗಳು, ಸಾಮಾಜಿಕ ಕಲ್ಯಾಣ ಯೋಜನೆಗಳು ಹಾಗೂ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸುವಲ್ಲಿ ಅವರ ಕೊಡುಗೆಯನ್ನು ಸೋನಿಯಾ ಗಾಂಧಿ ಸ್ಮರಿಸಿದ್ದಾರೆ.

ಮನಮೋಹನ್ ಸಿಂಗ್ ವಿರುದ್ಧ ಆರೋಪಗಳು ಹಾಗೂ ಅವರನ್ನು ಅಪಮಾನಗೊಳಿಸುವ ಪ್ರಯತ್ನಗಳು ನಡೆದಿದ್ದರೂ, ಪ್ರಧಾನಿಯಾಗಿ ಅವರು ಮಾಡಿದ ಕೆಲಸಗಳ ದಾಖಲೆಯೇ ಅವರ ಪರವಾಗಿ ನಿಲ್ಲಲಿದೆ. ಇತಿಹಾಸ ಅವರನ್ನು ಗೌರವದಿಂದ ಸ್ಮರಿಸಲಿದೆ ಎಂದು ಅವರು ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ ಹಾಗೂ ಶಿಕ್ಷಣದ ಹಕ್ಕು ಸೇರಿದಂತೆ ಹಲವು ಪ್ರಮುಖ ಸಾಮಾಜಿಕ ಕಲ್ಯಾಣ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಈ ಕ್ರಮಗಳು ಸಾಮಾನ್ಯ ನಾಗರಿಕರಿಗೆ ಹಕ್ಕು ಮತ್ತು ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಸೋನಿಯಾ ತಿಳಿಸಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಿಂದ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಾಗಿ, ಸರ್ಕಾರವನ್ನು ಪ್ರಶ್ನಿಸುವ ಅಧಿಕಾರ ನಾಗರಿಕರಿಗೆ ದೊರೆಯಿತು. ಮನರೇಗಾ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಭರವಸೆ ನೀಡಿದರೆ, ಆಹಾರ ಭದ್ರತಾ ಕಾಯ್ದೆ ಬಡವರಿಗೆ ಆಹಾರದ ಹಕ್ಕು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿತ್ತು ಎಂದು ಅವರು ವಿವರಿಸಿದ್ದಾರೆ.

ಮನಮೋಹನ್ ಸಿಂಗ್ ಅವರನ್ನು ಶಾಂತ ಸ್ವಭಾವದ, ವಿದ್ವಾಂಸ ಹಾಗೂ ತತ್ವಗಳಿಗೆ ಬದ್ಧರಾಗಿದ್ದ ನಾಯಕ ಎಂದು ಬಣ್ಣಿಸಿರುವ ಸೋನಿಯಾ, ರಾಜಕೀಯ ಆರೋಪ-ಪ್ರತ್ಯಾರೋಪಗಳ ಆಧಾರದ ಮೇಲೆ ಅವರ ಪರಂಪರೆಯನ್ನು ನಿರ್ಣಯಿಸದೆ, ಅವರ ನೀತಿಗಳು ಹಾಗೂ ದೇಶಕ್ಕೆ ನೀಡಿದ ಕೊಡುಗೆಯ ಆಧಾರದ ಮೇಲೆ ಮೌಲ್ಯಮಾಪನ ಮಾಡಬೇಕು ಎಂದು ಹೇಳಿದ್ದಾರೆ.

ಕಾಲ ಕಳೆದಂತೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ನೀಡಿದ ಕೊಡುಗೆಗಳ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ ಎಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande