ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಬೊಮ್ಮಾಯಿ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್: ನೀಟ್ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರದಲ್ಲಿ ಕಾಂಗ್ರೆಸ್‌ ದ್ವಿಮುಖ ನೀತಿ ಅನುಸರಿಸುತ್ತಿದೆ. ಇದರಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ವಿರುದ
ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ: ಬೊಮ್ಮಾಯಿ


ನವದೆಹಲಿ, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ನೀಟ್ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರದಲ್ಲಿ ಕಾಂಗ್ರೆಸ್‌ ದ್ವಿಮುಖ ನೀತಿ ಅನುಸರಿಸುತ್ತಿದೆ. ಇದರಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ವಿರುದ್ದ ದೆಹಲಿಯಲ್ಲಿ ಎನ್ ಡಿಎ ಸಂಸದರು ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರ್ಖಂಡ್‌ ನಲ್ಲಿ ವಿದ್ಯಾರ್ಥಿಗಳ ಮೇಲೆ ಹಗಲು-ರಾತ್ರಿ ಭಾರಿ ಲಾಠಿ ಚಾರ್ಜ್ ನಡೆಯುತ್ತಿದೆ, ಆದರೆ ರಾಹುಲ್ ಗಾಂಧಿ ಮಾತನಾಡುತ್ತಿಲ್ಲ. ಅವರಿಗೆ ಬರೀ ಬಾಯಿ ಮಾತಿನ ಅನುಕಂಪ ತೋರಿಸಿದ್ದಾರೆ. ಅವರು ನಿಜವಾಗಿಯೂ ಗಂಭೀರವಾಗಿದ್ದರೆ, ಜಾರ್ಖಂಡ್ ನ ಶಿಬು ಸೊರೇನ್ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಸಂಸತ್ತಿನಲ್ಲಿ ಈಗಲೂ ಕೂಡ ಕೇಂದ್ರ ಗೃಹ ಸಚಿವರು ಎಲ್ಲದಕ್ಕೂ ಉತ್ತರಿಸಲು ಸಿದ್ಧರಿದ್ದಾರೆ. ಆದರೆ, ಕಾಂಗ್ರೆಸ್ ನವರು ಅವರ ಉತ್ತರ ಕೇಳಲು ಮುಂದೆ ಬರುತ್ತಿಲ್ಲ ಎಂದು ಆರೋಪಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande