ಕೋಲಾರ ಕಾಳಹಸ್ತಿಪುರ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ದ.ಸಂ.ಸಮಿತಿ ಆರೋಪ
ಕೋಲಾರ ಕಾಳಹಸ್ತಿಪುರ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಆರೋಪ
ಕೋಲಾರ ತಾಲ್ಲೂಕಿನ ಕಾಳಹಸ್ತಿಪುರ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ರಕ್ಷಣಾ ಸಮಿತಿಯಿಂದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.


ಕೋಲಾರ, 11 ಆಗಷ್ಟ್ (ಹಿ.ಸ) :

ಆ್ಯಂಕರ್ : ತಾಲ್ಲೂಕಿನ ಕಾಳಹಸ್ತಿಪುರ ಗ್ರಾಮದ ಕೆರೆಯಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಬಡಾವಣೆಗಳು ಹಾಗೂ ಇಟ್ಟಿಗೆ ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಕರ್ನಾಟಕ ದಲಿತ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸಮಿತಿಯ ಅಧ್ಯಕ್ಷ ಮತ್ತಿಕುಂಟೆ ಕೃಷ್ಣ ಮಾತನಾಡಿ ಕಳೆದ ಎರಡು ತಿಂಗಳಿಂದ ಕಾಳಹಸ್ತಿಪುರ ಕೆರೆಯಲ್ಲಿ ಹಿಟಾಚಿ ಮತ್ತು ಟಿಪ್ಪರ್ಗಳ ಮೂಲಕ ಅಪಾರ ಪ್ರಮಾಣದ ಮಣ್ಣು ತೆಗೆದು ಸಾಗಿಸುತ್ತಿದ್ದು ಇದರ ವಿರುದ್ದ ಜಿಲ್ಲಾಧಿಕಾರಿ, ಪೋಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಿಸುವುದರಿಂದ ಕೆರೆಯ ಸ್ವರೂಪಕ್ಕೆ ಧಕ್ಕೆಯಾಗುತ್ತಿದ್ದು, ಲಕ್ಷಾಂತರ ರೂ. ಮೌಲ್ಯದ ಖನಿಜ ಸಂಪತ್ತು ನಷ್ಟವಾಗುತ್ತಿದೆ. ಈ ಕುರಿತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಅಕ್ರಮ ಮಣ್ಣು ಸಾಗಾಟ ತಡೆಯುವಂತೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹರಿಕೃಷ್ಣ ಅವರಿಗೆ ತಿಳಿಸಿದರು ತಾವು ಸ್ಥಳಕ್ಕೆ ಬರಲು ಸಾಧ್ಯವಿಲ್ಲ ಎಂದು ಹೇಳಿ ಸಿಬ್ಬಂದಿಯನ್ನು ಕಳುಹಿಸಿದ್ದರು. ಸ್ಥಳಕ್ಕೆ ಬಂದ ಸಿಬ್ಬಂದಿ ಆಚಾರಿ ಮಣ್ಣು ತೆಗೆಯುವುದನ್ನು ತಡೆದಿಲ್ಲ

ಈ ಪ್ರಕರಣದಲ್ಲಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರದ ಕುರಿತು ಸಾರ್ವಜನಿಕ ವಲಯದಲ್ಲಿ ಅನುಮಾನಗಳಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಟಿಪ್ಪರ್ ಹಾಗೂ ಹಿಟಾಚಿಗಳನ್ನು ಪರಿಶೀಲಿಸಿದರೂ ನಂತರ ವಾಹನಗಳನ್ನು ವಶಕ್ಕೆ ಪಡೆಯದೆ ಕಳುಹಿಸಲಾಗಿದೆ ಮತ್ತು ಪ್ರಕರಣ ದಾಖಲಿಸಿಲ್ಲ ಈಗಾಗಲೇ ಟಿಪ್ಪರ್ ವಾಹನಗಳ ನೋಂದಣಿ ಸಂಖ್ಯೆಗಳಿರುವ ಛಾಯಾಚಿತ್ರಗಳು ಹಾಗೂ ಹಿಟಾಚಿಗಳ ಚಿತ್ರಗಳೊಂದಿಗೆ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಣ್ಣ ನೀರಾವರಿ ಇಲಾಖೆಗೆ ದೂರು ಸಲ್ಲಿಸಲಾಗಿದೆ. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಅಕ್ರಮ ಮಣ್ಣು ಸಾಗಾಟಕ್ಕೆ ಕಡಿವಾಣ ಹಾಕಿ, ವಾಹನಗಳ ಮಾಲೀಕರು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಮಾನತು ಮಾಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ಗಾಂಧಿನಗರ ಲಕ್ಷ್ಮೀನಾರಾಯಣ, ಅಂಬೇಡ್ಕರ್ ನಗರ ಮಂಜುನಾಥ್, ಅಜಯ್, ಚದುಮನಹಳ್ಳಿ ಶ್ರೀರಾಮ್, ಹರಳಕುಂಟೆ ರಾಜಣ್ಣ ಮುಂತಾದವರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande