ಡಾ.ರಾಜ್ ಕುಮಾರ್ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಪರಿಶೀಲನೆ
ಬೆಂಗಳೂರು, 11 ಆಗಸ್ಟ್ (ಹಿ.ಸ.): ಆ್ಯಂಕರ್: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಬೆಳಗ್ಗೆ ರಾಜಾಜಿನಗರ ವಿಭಾಗದ ಡಾ. ರಾಜಕುಮಾರ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್‌ಟಾಪಿಂಗ್ ಕಾಮಗಾರಿಯನ್ನು ಪರಿಶೀಲಿಸಿದರು. ನವರಂಗ್ ಥಿಯೇಟರ್‌ನಿಂದ ರಾಜಾಜಿನಗರ ಎಂಟ್ರೇನ
Visit


ಬೆಂಗಳೂರು, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಬೆಳಗ್ಗೆ ರಾಜಾಜಿನಗರ ವಿಭಾಗದ ಡಾ. ರಾಜಕುಮಾರ್ ರಸ್ತೆಯಲ್ಲಿ ನಡೆಯುತ್ತಿರುವ ವೈಟ್‌ಟಾಪಿಂಗ್ ಕಾಮಗಾರಿಯನ್ನು ಪರಿಶೀಲಿಸಿದರು.

ನವರಂಗ್ ಥಿಯೇಟರ್‌ನಿಂದ ರಾಜಾಜಿನಗರ ಎಂಟ್ರೇನ್ಸ್‌ವರೆಗೆ ಕಾಮಗಾರಿ ಪರಿಶೀಲಿಸಿದ ಆಯುಕ್ತರು, ಕಾಮಗಾರಿಯ ಗುಣಮಟ್ಟ, ಪ್ರಗತಿ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಬದಿ ಅಂಗಡಿಗಳ ಮುಂಭಾಗ ಸ್ವಚ್ಛತೆ ಕಾಪಾಡದಿರುವುದನ್ನು ಗಮನಿಸಿದ ಅವರು, ಅಂಗಡಿ ಮಾಲೀಕರು ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಚ್ಚರಿಕೆ ನೀಡಿದರು.

ಬಳಿಕ ಮಲ್ಲೇಶ್ವರ ವಿಭಾಗದ ಡಾ. ರಾಜಕುಮಾರ್ ರಸ್ತೆಯ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಸರ್ಕಲ್ ಹಾಗೂ ಒರಾಯನ್ ಮಾಲ್‌ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಕುರಿತು ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳ ಅಹವಾಲು ಆಲಿಸಿದರು.

ಈ ಸಂದರ್ಭದಲ್ಲಿ ವಲಯ-1ರ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆ, ಅಧೀಕ್ಷಕ ಅಭಿಯಂತರರಾದ ಜಯಶಂಕರ್, ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು ಹಾಗೂ ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande