ಹಣವಾಳ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಪರಿಶೀಲನೆ
ಕೊಪ್ಪಳ, 11 ಆಗಸ್ಟ್ (ಹಿ.ಸ.) ಆ್ಯಂಕರ್: ಪ್ರತಿಯೊಂದು ಕುಟುಂಬವು ಕೆರೆ ಪುನಶ್ಚೇತನ ಕಾಮಗಾರಿ ಮತ್ತು ಇತ್ಯಾದಿ ವೈಯಕ್ತಿಕ ಕಾಮಗಾರಿಗಳಲ್ಲಿ ಒಟ್ಟು 125 ದಿನಗಳ ಕೂಲಿ ಕೆಲಸ ನಿರ್ವಹಿಸುವಂತೆ ಕೊಪ್ಪಳ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಕರೆ ನೀಡಿದರು. ಹಲಗೇರಿ ಗ್ರ
ಹಣವಾಳ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಪರಿಶೀಲನೆ


ಕೊಪ್ಪಳ, 11 ಆಗಸ್ಟ್ (ಹಿ.ಸ.)

ಆ್ಯಂಕರ್: ಪ್ರತಿಯೊಂದು ಕುಟುಂಬವು ಕೆರೆ ಪುನಶ್ಚೇತನ ಕಾಮಗಾರಿ ಮತ್ತು ಇತ್ಯಾದಿ ವೈಯಕ್ತಿಕ ಕಾಮಗಾರಿಗಳಲ್ಲಿ ಒಟ್ಟು 125 ದಿನಗಳ ಕೂಲಿ ಕೆಲಸ ನಿರ್ವಹಿಸುವಂತೆ ಕೊಪ್ಪಳ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಕರೆ ನೀಡಿದರು.

ಹಲಗೇರಿ ಗ್ರಾಮ ಪಂಚಾಯತಿಯಿಂದ ವಿಕಸಿತ ಭಾರತ ಜೀ ರಾಮ್ ಜೀ ಯೋಜನೆಯಡಿ ಹಣವಾಳ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿಕಾರರನ್ನುದ್ದೇಶಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ರೂ. 382 ಕೂಲಿ ಬರುವಂತೆ ಕೂಲಿ ಕೆಲಸ ನಿರ್ವಹಿಸಬೇಕು. ವಿಬಿಜೀರಾಮ್ ಜೀ ಯೋಜನೆಯಡಿ ಪ್ರಸ್ತುತ ಪ್ರತಿ ದಿನಕ್ಕೆ ಕೂಲಿ ರೂ. 382 ಹಣ ಪಾವತಿಸಲಾಗುತ್ತದೆ. ನಿಮಗೆ ನೀಡಿರುವ ಅಳತೆಗನುಗುಣವಾಗಿ ಕೆಲಸ ನಿರ್ವಹಿಸಬೇಕೆಂದರು.

ಕೂಲಿಕಾರರೊಂದಿಗೆ ಸಂವಾದ: ಕೆರೆ ಪುನಶ್ಚೇತನ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರೊಂದಿಗೆ ತಾಲೂಕ ಪಂಚಾಯತಿ ಇಒ ಸಂವಾದ ನಡೆಸಿ ಮಹಿಳೆಯರು ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದರು. ನಂತರ ಕಾಮಗಾರಿಯಲ್ಲಿ ಕೆಲಸಕ್ಕೆ ಹಾಜರಾಗಿರುವ ಕುರಿತು ಎನ್.ಎಂ.ಎಂ.ಎಸ್ ಹಾಜರಾತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಹಾಯಕ ರಫೀಕ ಬಿಎಪ್ಟಿ ಮಲ್ಲಯ್ಯ, ಡಿಇಒ ಮಾಲತೇಶ, ಗ್ರಾಮ ಕಾಯಕ ಮಿತ್ರ ವಿಜಯಲಕ್ಷ್ಮೀ, ಕಾಯಕ ಬಂಧು ರುದ್ರಪ್ಪ ಕರ್ಕಿಹಳ್ಳಿ, ಗವಿಸಿದ್ದಪ್ಪ, 179 ಕೂಲಿಕಾರರು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande