
ಬೆಂಗಳೂರು, 11 ಆಗಸ್ಟ್ (ಹಿ.ಸ.):
ಆ್ಯಂಕರ್:
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಹಗರಣದ ಆರೋಪಿ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಮಹಾದ್ರೋಹ ಎಸಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರ ಮರುಸಚಿವ ಸಂಪುಟ ಸೇರ್ಪಡೆ ವಿರುದ್ಧ ಸದನದ ಒಳಗೂ ಹಾಗೂ ಹೊರಗೂ ಎನ್‌ಡಿಎ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ರಾಜ್ಯದ ಭೀಕರ ಬರ ಪರಿಸ್ಥಿತಿ, ರೈತರ ಸಂಕಷ್ಟ ಹಾಗೂ ಜನರ ಬವಣೆಗಳಿಗೆ ಧ್ವನಿಯಾಗಿ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅಗತ್ಯ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ವಿಜಯೇಂದ್ರ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.