

ಬಳ್ಳಾರಿ, 11 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಳ್ಳಾರಿ ಜಿಲ್ಲಾ ಮಾದಿಗ ನೌಕರರ ಸಂಘವು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಒಂದು ದಿನದ ಕಾರ್ಯಾಗಾರವನ್ನು ಅಂಬೇಡ್ಕರ್ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.
ಬಳ್ಳಾರಿ ಜಿಲ್ಲಾ ಮಾದಿಗ ನೌಕರರ ಅಧ್ಯಕ್ಷರಾದ ಉಪ ತಹಶಿಲ್ದಾರ ವಿಜಯ್ ಕುಮಾರ್ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಬಡ ವಿದ್ಯಾರ್ಥಿಗಳಿಗೆ ಸಂಘವು ಊರುಗೋಲಾಗಿರುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನವನ್ನು ಪಡೆದು, ಸಮಾಜವನ್ನು ಮುನ್ನಡೆಸಬೇಕು ಎಂದು ಹೇಳಿದರು.
ಗೌರವಧ್ಯಕ್ಷರಾದ ಚಾಮರಾಜ, ಸಮುದಾಯದ ಮುಖಂಡರು ಹಾಗೂ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿರುವ
ನಿಂಗಪ್ಪ ಅವರು ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಬಸವರಾಜ ಹಾಗೂ ಶೇಖರ್ ಅವರು ಪಾಲ್ಗೊಂಡು, ಸ್ಪರ್ಧಾತ್ಮಕ ಪರೀಕ್ಷೆಗಳು ಕುರಿತು ವಿಶ್ಲೇಷಣೆ ಮಾಡಿದರು.
ಬಳ್ಳಾರಿ ಜಿಲ್ಲಾ ಮಾದಿಗ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಜಡೇಶ್, ಉಪಾಧ್ಯಕ್ಷರಾದ ಗೋವಿಂದರಾಜು, ಖಜಾಂಚಿಗಳಾದ ಹುಲೆಪ್ಪ ಮತ್ತು ಪಧಾಧಿಕಾರಿಗಳು ಉಪಸ್ಥಿತರಿದ್ದರು.
ಎರಿಸ್ವಾಮಿ ಅವರು ನಿರೂಪಣೆ ಮಾಡಿದರು. ಚಿಗುರು ಕಲಾ ತಂಡವು ಕ್ರಾಂತಿ ಗೀತೆಗಳನ್ನು ಹಾಡಿತು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್