ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವದ ಪೂರ್ವಸಿದ್ಧತಾ ಸಭೆ
ಗದಗ, 11 ಆಗಸ್ಟ್ (ಹಿ.ಸ.) ಆ್ಯಂಕರ್:- ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15ರಂದು ಆಚರಿಸಲಾಗುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು. ರಾಷ್ಟ್ರೀಯ ಹಬ
ಫೋಟೋ


ಗದಗ, 11 ಆಗಸ್ಟ್ (ಹಿ.ಸ.)

ಆ್ಯಂಕರ್:- ಜಿಲ್ಲಾ ಮಟ್ಟದಲ್ಲಿ ಆಗಸ್ಟ್ 15ರಂದು ಆಚರಿಸಲಾಗುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು.

ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಶಿಷ್ಠಾಚಾರ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಯಕ್ರಮದ ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯ ಸಮಾರಂಭಕ್ಕೆ ಗಣ್ಯರು, ಜನಪ್ರತಿನಿಧಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸುವ ಪ್ರಕ್ರಿಯೆಯಲ್ಲಿ ಸೂಕ್ತ ನಿಗಾ ವಹಿಸಬೇಕು. ಆಮಂತ್ರಣ ಪತ್ರಿಕೆಗಳನ್ನು ಶಿಷ್ಠಾಚಾರದ ನಿಯಮಾನುಸಾರ ಸಕಾಲದಲ್ಲಿ ತಲುಪಿಸುವುದರೊಂದಿಗೆ ಅತಿಥಿಗಳ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೆ ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಮುಖ್ಯ ಸಮಾರಂಭದ ವೇದಿಕೆ ಅಲಂಕಾರವನ್ನು ಅಚ್ಚುಕಟ್ಟಾಗಿ ಹಾಗೂ ಆಕರ್ಷಕವಾಗಿ ಕೈಗೊಳ್ಳಬೇಕು. ರಾಷ್ಟ್ರೀಯ ಹಬ್ಬದ ಘನತೆಗೆ ತಕ್ಕಂತೆ ವೇದಿಕೆ ಸಿದ್ಧಪಡಿಸುವುದರೊಂದಿಗೆ ಕ್ರೀಡಾಂಗಣದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಆಹ್ವಾನಿತ ಅತಿಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.

ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಶಾಲಾ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರುವ ಕುರಿತು ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಯಿತು. ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಸುರಕ್ಷಿತವಾಗಿ ಕರೆತಂದು, ಕಾರ್ಯಕ್ರಮ ಮುಕ್ತಾಯದ ನಂತರ ಯಾವುದೇ ತೊಂದರೆಯಾಗದಂತೆ ಅವರನ್ನು ಸುರಕ್ಷಿತವಾಗಿ ಮರಳಿ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಯಿತು.

ವಿದ್ಯಾರ್ಥಿಗಳ ಆಗಮನ ಮತ್ತು ನಿರ್ಗಮನ ಸಂದರ್ಭದಲ್ಲಿ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಸಾರಿಗೆ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಸೂಚಿಸಲಾಯಿತು.

ಜಿಲ್ಲಾ ಕ್ರೀಡಾಂಗಣದ ಸಂಪೂರ್ಣ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೂ ಮುನ್ನ ಕ್ರೀಡಾಂಗಣದ ಒಳ ಹಾಗೂ ಹೊರ ಆವರಣವನ್ನು ಸ್ವಚ್ಛಗೊಳಿಸುವುದರೊಂದಿಗೆ, ಸಾರ್ವಜನಿಕರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗುವಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಆಕರ್ಷಕ ಪಥಸಂಚಲನಕ್ಕೆ ಸಿದ್ಧತೆ, ಮುಖ್ಯ ಸಮಾರಂಭದ ಪ್ರಮುಖ ಆಕರ್ಷಣೆಯಾದ ಪಥಸಂಚಲನವನ್ನು ಶಿಸ್ತುಬದ್ಧವಾಗಿ ಹಾಗೂ ಆಕರ್ಷಕವಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಪಥಸಂಚಲನದಲ್ಲಿ ಪೊಲೀಸ್ ಇಲಾಖೆ, ಎನ್ಸಿಸಿ, ಎನ್ಎಸ್ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದು, ಎಲ್ಲಾ ತಂಡಗಳು ಸೂಕ್ತ ಪೂರ್ವಾಭ್ಯಾಸ ನಡೆಸಬೇಕು. ಪಥಸಂಚಲನವು ಕ್ರಮಬದ್ಧವಾಗಿ ಹಾಗೂ ರಾಷ್ಟ್ರೀಯ ಹಬ್ಬದ ಘನತೆಗೆ ತಕ್ಕಂತೆ ನಡೆಯುವಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸುವ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಸನ್ಮಾನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು.

ಸಚಿವರ ಸ್ವಾತಂತ್ರ್ಯೋತ್ಸವ ಸಂದೇಶವನ್ನು ಸಿದ್ಧಪಡಿಸುವ ಕುರಿತು ಸಹ ಸಭೆಯಲ್ಲಿ ಚರ್ಚೆ ನಡೆಯಿತು. ಜಿಲ್ಲೆಯ ಅಭಿವೃದ್ಧಿ, ಸರ್ಕಾರದ ಜನಪರ ಯೋಜನೆಗಳು, ಸ್ವಾತಂತ್ರ್ಯ ಹೋರಾಟದ ಮೌಲ್ಯಗಳು, ರಾಷ್ಟ್ರೀಯ ಏಕತೆ ಹಾಗೂ ದೇಶಭಕ್ತಿಯ ಸಂದೇಶವನ್ನು ಒಳಗೊಂಡಂತೆ ಸಂದೇಶವನ್ನು ಸಿದ್ಧಪಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಯಿತು.

ಸ್ವಾತಂತ್ರ್ಯೋತ್ಸವ ಆಚರಣೆಯ ಎಲ್ಲ ಸಿದ್ಧತೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಪ್ರತಿಯೊಂದು ಇಲಾಖೆಯೂ ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ ಎಂ. ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande