ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ
ಬೆಂಗಳೂರು, 11 ಆಗಸ್ಟ್ (ಹಿ.ಸ.): ಆ್ಯಂಕರ್: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ. ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಬಿಸಿಲಿನ ವಾತಾವರಣ ಕಂ
ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ


ಬೆಂಗಳೂರು, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ತಿಳಿಸಿದೆ.

ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಭಾಗದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಮಳೆಯೊಂದಿಗೆ ಕೆಲವೆಡೆ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande