ಸೇವಾ ನಿರತ ಶಿಕ್ಷಕರ ಅರ್ಹತಾ ಪರೀಕ್ಷೆ ವಿಚಾರ: ಕೇಂದ್ರ ಶಿಕ್ಷಣ ಸಚಿವರೊಂದಿಗೆ ಜಗದೀಶ್ ಶೆಟ್ಟರ್ ಸಮಾಲೋಚನೆ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್: ಸೇವಾ ನಿರತ ಶಿಕ್ಷಕರಿಗೆ ಅನ್ವಯಿಸಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದ ಶಿಕ್ಷಕರ ಸೇವೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು. ನವದೆಹಲಿಯ ಸಂಸತ
Met


ನವದೆಹಲಿ, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ಸೇವಾ ನಿರತ ಶಿಕ್ಷಕರಿಗೆ ಅನ್ವಯಿಸಿರುವ ಶಿಕ್ಷಕರ ಅರ್ಹತಾ ಪರೀಕ್ಷೆಯಿಂದ ಶಿಕ್ಷಕರ ಸೇವೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಸಲ್ಲಿಸಿದರು.

ನವದೆಹಲಿಯ ಸಂಸತ್ ಭವನದಲ್ಲಿ ಸಚಿವರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಇತ್ತೀಚೆಗೆ ಸೇವಾ ನಿರತ ಶಿಕ್ಷಕರನ್ನೂ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಒಳಪಡಿಸಿರುವುದರಿಂದ ಹಲವು ಶಿಕ್ಷಕರು ತಮ್ಮ ಸೇವೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಹೀಗಾಗಿ ಶಿಕ್ಷಕರ ಸೇವಾ ಷರತ್ತುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು, ಸೇವಾ ನಿರತ ಶಿಕ್ಷಕರನ್ನು ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದರು.

ಇದೇ ವೇಳೆ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೊಸ ಕೇಂದ್ರೀಯ ವಿದ್ಯಾಲಯ ಹಾಗೂ ನವೋದಯ ಶಾಲೆಗಳನ್ನು ಸ್ಥಾಪಿಸುವ ಬಗ್ಗೆಯೂ ಸಚಿವರ ಗಮನ ಸೆಳೆದರು. ಗೋಕಾಕ, ಮೂಡಲಗಿ ಹಾಗೂ ಯರಗಟ್ಟಿ ಪಟ್ಟಣಗಳ ಸಮೀಪ ನೂತನ ಕೇಂದ್ರೀಯ ವಿದ್ಯಾಲಯಗಳನ್ನು ಮತ್ತು ರಾಮದುರ್ಗ ತಾಲ್ಲೂಕಿನ ಸಾಲನಳ್ಳಿ ಸಮೀಪ ನವೋದಯ ಶಾಲೆ ಆರಂಭಿಸಬೇಕೆಂಬುದು ಹಲವು ವರ್ಷಗಳಿಂದ ಪೋಷಕರು ಹಾಗೂ ಸಾರ್ವಜನಿಕರ ಬೇಡಿಕೆಯಾಗಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಈ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶೆಟ್ಟರ್ ಅವರು ಸಚಿವರಲ್ಲಿ ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande