ಪೂಂಚ್ ನಲ್ಲಿ ಸುರಂಗದ ಬಳಿ ಅನುಮಾನಾಸ್ಪದ ಚಟುವಟಿಕೆ; ಭದ್ರತಾ ಪಡೆಗಳಿಂದ ತೀವ್ರ ಶೋಧ
ಪೂಂಚ್, 11 ಆಗಸ್ಟ್ (ಹಿ.ಸ.): ಆ್ಯಂಕರ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ವ್ಯಾಪಕ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿವೆ. ನಿರ್ಮಾಣ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರ
ಪೂಂಚ್ ನಲ್ಲಿ ಸುರಂಗದ ಬಳಿ ಅನುಮಾನಾಸ್ಪದ ಚಟುವಟಿಕೆ; ಭದ್ರತಾ ಪಡೆಗಳಿಂದ ತೀವ್ರ ಶೋಧ


ಪೂಂಚ್, 11 ಆಗಸ್ಟ್ (ಹಿ.ಸ.):

ಆ್ಯಂಕರ್:

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ವಲಯದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ಅನುಮಾನಾಸ್ಪದ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ವ್ಯಾಪಕ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿವೆ.

ನಿರ್ಮಾಣ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಅನುಮಾನಾಸ್ಪದ ಚಟುವಟಿಕೆ ಗಮನಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಮಾಹಿತಿ ಲಭಿಸಿದ ತಕ್ಷಣ ಪೊಲೀಸರು, ವಿಶೇಷ ಕಾರ್ಯಾಚರಣೆ ತಂಡ ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಭಾತದುರಿಯಾ, ಸಂಗಿಯೊಟ್ ಸೇರಿದಂತೆ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಶೋಧ ನಡೆಸುತ್ತಿದ್ದಾರೆ.

ಸದ್ಯದವರೆಗೆ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್, ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande