ಕಾವೇರಿ ವಿಚಾರದಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಬೆಂಗಳೂರು, 11 ಆಗಸ್ಟ್ (ಹಿ.ಸ.): ಆ್ಯಂಕರ್:ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಒಪ್ಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ
ಕಾವೇರಿ ವಿಚಾರದಲ್ಲಿ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ


ಬೆಂಗಳೂರು, 11 ಆಗಸ್ಟ್ (ಹಿ.ಸ.):

ಆ್ಯಂಕರ್:ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಒಪ್ಪಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಮಿತ್ರಪಕ್ಷದ ಸರ್ಕಾರಕ್ಕೆ ಅನುಕೂಲವಾಗುವಂತೆ ಮೃದು ಧೋರಣೆ ತಾಳುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಟೀಕಿಸಿದ್ದಾರೆ.

ಕಾವೇರಿ ಪ್ರಾಧಿಕಾರ ಈ ಹಿಂದೆ 3,500 ಕ್ಯೂಸೆಕ್ ನೀರು ಸಾಕು ಎಂದು ಹೇಳಿದ್ದರೂ ಇದೀಗ 12,000 ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡುವ ಪರಿಸ್ಥಿತಿ ಏಕೆ ಬಂದಿದೆ? ರಾಜ್ಯದ ಪರವಾಗಿ ಸರ್ಕಾರ ಏನು ಸಾಧಿಸಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸರ್ಕಾರ ಸಮರ್ಥವಾಗಿ ಮಂಡಿಸಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿತ್ತೇ ಎಂದು ಪ್ರಶ್ನಿಸಿದ ಅವರು, ಸರ್ಕಾರದ ಸಿದ್ಧತೆ ಹಾಗೂ ಹಿನ್ನಡೆಗೆ ಕಾರಣಗಳ ಕುರಿತು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೃಷಿ ಸಚಿವರಿಲ್ಲ, ಮುಖ್ಯಮಂತ್ರಿಗಳಿಗೆ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸಲು ಸಮಯವಿಲ್ಲ. ಸಚಿವರಿಗೆ ಖಾತೆ ಹಂಚಿಕೆಯ ಚಿಂತೆಯೇ ಹೊರತು ರೈತರ ಹಾಗೂ ರಾಜ್ಯದ ಹಿತಾಸಕ್ತಿಯ ಬಗ್ಗೆ ಕಾಳಜಿ ಇಲ್ಲ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

“ರೈತರ ಪರ ನಿಲ್ಲುವುದು ಘೋಷಣೆಗಳಿಂದಲ್ಲ; ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಹಿತವನ್ನು ಕಾಪಾಡುವ ದೃಢ ನಿರ್ಧಾರ, ಅಗತ್ಯ ಸಿದ್ಧತೆ ಮತ್ತು ಪರಿಣಾಮಕಾರಿ ಕ್ರಮಗಳಿಂದ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಿಜಯೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande