ಬಿ. ನಾಗೇಂದ್ರ ಸಚಿವರಾಗಿರುವವರೆಗೆ ಅಧಿವೇಶನ ನಡೆಸಲು ಬಿಡುವುದಿಲ್ಲ: ಆರ್. ಅಶೋಕ
ಬೆಂಗಳೂರು, 11 ಆಗಸ್ಟ್ (ಹಿ.ಸ.): ಆ್ಯಂಕರ್:ಬಿ. ನಾಗೇಂದ್ರ ಸಚಿವರಾಗಿರುವವರೆಗೆ ವಿಧಾನಸಭೆ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೂಡಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಗ್ರಹಿಸಿದರು. ಪತ್ರಿಕಾಗೋಷ್
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 11 ಆಗಸ್ಟ್ (ಹಿ.ಸ.):

ಆ್ಯಂಕರ್:ಬಿ. ನಾಗೇಂದ್ರ ಸಚಿವರಾಗಿರುವವರೆಗೆ ವಿಧಾನಸಭೆ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೂಡಲೇ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಪ್ರತಿಯೊಂದು ವಿಚಾರಕ್ಕೂ ಮುಖ್ಯಮಂತ್ರಿಯೇ ಉತ್ತರಿಸುವುದಾದರೆ ಸಚಿವರ ಅಗತ್ಯವೇನು ಎಂದು ಪ್ರಶ್ನಿಸಿದರು. ಸಚಿವರಿಗೆ ಜನರ ತೆರಿಗೆ ಹಣದಿಂದ ಕಾರು, ಮನೆ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತದೆ. ಹೀಗಾಗಿ ಸಂವಿಧಾನದ ಆಶಯದಂತೆ ಸಚಿವರು ತಮ್ಮ ಇಲಾಖೆಗಳ ಜವಾಬ್ದಾರಿ ನಿರ್ವಹಿಸಬೇಕು ಎಂದರು.

ಬಿಡದಿ ಟೌನ್‌ಶಿಪ್‌, ಕೆಪಿಎಸ್‌ಸಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕಿದೆ. ಆದರೆ ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಬಿಜೆಪಿ ವತಿಯಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಹೋರಾಟ ಆರಂಭಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ವಿಧಾನಸಭೆಯ ಒಳಗೂ ಹೊರಗೂ ಹೋರಾಟ ಮುಂದುವರಿಯಲಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ಹಲವು ತನಿಖೆಗಳು ನಡೆಯುತ್ತಿವೆ ಎಂದು ಆರೋಪಿಸಿದ ಅಶೋಕ, ಇಂತಹ ಪರಿಸ್ಥಿತಿಯಲ್ಲಿ ಅವರು ಸಚಿವರಾಗಿ ಮುಂದುವರಿಯುವುದು ಸರಿಯಲ್ಲ ಎಂದರು. ನಾಗೇಂದ್ರ ಅವರನ್ನು ಈ ಹಿಂದೆ ಸಚಿವ ಸ್ಥಾನದಿಂದ ತೆಗೆದುಹಾಕಿದ್ದು ಏಕೆ ಮತ್ತು ಇದೀಗ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ಏಕೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಉಲ್ಲೇಖಿಸಿದ ಅವರು, ದಲಿತರ ಹಣದ ಅಕ್ರಮದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಸಂಪುಟದಲ್ಲಿ ಮುಂದುವರಿಸಿದರೆ ಇಡೀ ಸರ್ಕಾರಕ್ಕೆ ಕಳಂಕ ಬರುತ್ತದೆ ಎಂದು ಆರೋಪಿಸಿದರು.

ವಿಧಾನಪರಿಷತ್‌ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬದಲು ಬೆದರಿಕೆ ಹಾಕಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿದ ಅಶೋಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande