ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ
ಗದಗ, 12 ಆಗಸ್ಟ್ (ಹಿ.ಸ.) ಆ್ಯಂಕರ್:- ಶೈಕ್ಷಣಿಕ ವರ್ಷ 2026-27ನೇ ಸಾಲಿನ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿ ಸೇರಿದಂತೆ ಅಧಿ
ಫೋಟೋ


ಗದಗ, 12 ಆಗಸ್ಟ್ (ಹಿ.ಸ.)

ಆ್ಯಂಕರ್:- ಶೈಕ್ಷಣಿಕ ವರ್ಷ 2026-27ನೇ ಸಾಲಿನ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆ ಅಡಿಯಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿ ಸೇರಿದಂತೆ ಅಧಿಕೃತ ಸಂಸ್ಥೆಗಳಿಂದ ಮಾನ್ಯತೆ ಪಡೆದ ಮೊದಲ ವೃತ್ತಿಪರ ಪದವಿ ಕೋರ್ಸ್ಗಳಾದ ಬಿಇ, ಬಿ.ಟೆಕ್, ಬಿಡಿಎಸ್, ಎಂಬಿಬಿಎಸ್, ಬಿಎಡ್, ಬಿಬಿಎ, ಬಿಸಿಎ, ಬಿ.ಫಾರ್ಮಾ ಹಾಗೂ ಎಲ್ಎಲ್ಬಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಬಿಎ ಹಾಗೂ ಎಂಸಿಎ ಕೋರ್ಸ್ಗಳ 2026-27ನೇ ಶೈಕ್ಷಣಿಕ ಸಾಲಿನ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಹ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಸಲು 2026ರ ಡಿಸೆಂಬರ್ 31 ಕೊನೆಯ ದಿನವಾಗಿದೆ. ಆಸಕ್ತ ವಿದ್ಯಾರ್ಥಿಗಳು ಕೆಎಸ್ಬಿಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಮಾಜಿ ಸೈನಿಕರ ಅರ್ಹ ಮಕ್ಕಳು ಈ ವಿದ್ಯಾರ್ಥಿವೇತನ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande