ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಗದಗ, 12 ಆಗಸ್ಟ್ (ಹಿ.ಸ.) ಆ್ಯಂಕರ್:- ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗದಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯೂ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10, 2026 ಕೊನೆಯ
ಫೋಟೋ


ಗದಗ, 12 ಆಗಸ್ಟ್ (ಹಿ.ಸ.)

ಆ್ಯಂಕರ್:- ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗದಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿಆರ್ಡಬ್ಲ್ಯೂ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10, 2026 ಕೊನೆಯ ದಿನವಾಗಿದೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಜ್ಜೂರು ಮತ್ತು ಹೆಬ್ಬಾಳ, ಮುಂಡರಗಿ ತಾಲೂಕಿನ ಮುರಡಿ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ಮುಂಡರಗಿ, ರೋಣ ತಾಲೂಕಿನ ಅಸೂಟಿ ಮತ್ತು ಕುರಹಟ್ಟಿ ಗ್ರಾಮ ಪಂಚಾಯಿತಿಗಳು ಹಾಗೂ ಪುರಸಭೆ ರೋಣ, ಗಜೇಂದ್ರಗಡ ತಾಲೂಕಿನ ಶಾಂತಗೇರಿ ಮತ್ತು ರಾಮಪುರ ಗ್ರಾಮ ಪಂಚಾಯಿತಿಗಳಲ್ಲಿ ವಿಆರ್ಡಬ್ಲ್ಯೂ ಹುದ್ದೆಗಳು ಖಾಲಿ ಇವೆ.

ಅರ್ಹತೆ ಏನು?

ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 18ರಿಂದ 45 ವರ್ಷ ವಯೋಮಿತಿಯ, ಎಸ್ಎಸ್ಎಲ್ಸಿ ಉತ್ತೀರ್ಣರಾಗಿರುವ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಂಗವಿಕಲರ ಪುನರ್ವಸತಿಗೆ ಸಂಬಂಧಿಸಿದಂತೆ ವಿಶೇಷ ಶಿಕ್ಷಣ, ಆರ್ಸಿಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ನೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ ಸೇರಿದಂತೆ ವಿಶೇಷ ಜ್ಞಾನ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಭಾಗಶಃ ಅಂಧರು, ಭಾಗಶಃ ಶ್ರವಣದೋಷವುಳ್ಳವರು ಹಾಗೂ ದೈಹಿಕ ಅಂಗವಿಕಲ ನಿರುದ್ಯೋಗಿ ಅರ್ಹ ವಿಕಲಚೇತನ ಯುವಕ-ಯುವತಿಯರನ್ನು ಇಲಾಖೆಯ ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ, ಗದಗ, ಕೊಠಡಿ ಸಂಖ್ಯೆ 29ಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗದಗ ಕಚೇರಿ ದೂರವಾಣಿ: 08372-220419 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande