
ಕೊಪ್ಪಳ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಹೊಂದಿರುವ ಕಟ್ಟಡಗಳು ಬಾಡಿಗೆಗೆ ಅವಶ್ಯವಿದ್ದು, ಆಸಕ್ತ ಖಾಸಗಿ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಮಂಜೂರಾತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದರಿಂದ ಕೊಪ್ಪಳದಲ್ಲಿ 100 ವಿದ್ಯಾರ್ಥಿಗಳಿಗೆ ಸ್ಥಳಾವಕಾಶವಿರುವ 10 ಶೌಚಾಲಯ ಮತ್ತು 10 ಸ್ನಾನ ಗೃಹಗಳಿರುವ ಹಾಗೂ ಅಗತ್ಯ ಮೂಲಭೂತ ಸೌಕರ್ಯ ಹೊಂದಿರುವ ಬಾಡಿಗೆ ಕಟ್ಟಡದ ಅವಶ್ಯವಿದ್ದು, ಆಸಕ್ತ ಖಾಸಗಿ ಕಟ್ಟಡ ಮಾಲೀಕರು ಹೊಸ ಆರ್.ಟಿ ಓ ಕಛೇರಿ ಹತ್ತಿರವಿರುವ ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಛೇರಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್