ಆನೆಗಳ ಸಂರಕ್ಷಣೆ ಪರಿಸರ ಸಮತೋಲನಕ್ಕೆ ಅತ್ಯಗತ್ಯ: ಡಿ.ಕೆ. ಶಿವಕುಮಾರ್
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್:ಅರಣ್ಯಗಳ ಜೈವಿಕ ವೈವಿಧ್ಯತೆಯನ್ನು ಕಾಪಾಡುವಲ್ಲಿ ಆನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಶ್ವ ಆನೆ ದಿನದ ಅಂಗವಾಗಿ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಆನೆಗಳು ನೂರಾರು ಬಗೆಯ ಸಸ್ಯಗಳ ಮರ
Cm X post


ಬೆಂಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:ಅರಣ್ಯಗಳ ಜೈವಿಕ ವೈವಿಧ್ಯತೆಯನ್ನು ಕಾಪಾಡುವಲ್ಲಿ ಆನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಶ್ವ ಆನೆ ದಿನದ ಅಂಗವಾಗಿ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಆನೆಗಳು ನೂರಾರು ಬಗೆಯ ಸಸ್ಯಗಳ ಮರುಹುಟ್ಟಿಗೆ ಕಾರಣವಾಗುವುದರ ಜೊತೆಗೆ ಕಾಡಿನಲ್ಲಿ ದಾರಿಗಳನ್ನು ನಿರ್ಮಿಸುವ ಮೂಲಕ ಸಣ್ಣಪುಟ್ಟ ಜೀವಿಗಳ ಉಳಿವಿಗೂ ನೆರವಾಗುತ್ತವೆ. ಹೀಗಾಗಿ ಅವುಗಳನ್ನು ‘ಕಾಡಿನ ಎಂಜಿನಿಯರ್‌ಗಳು’ ಎಂದು ಕರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯಲ್ಲಿ ಗಜರಾಜನಿಗೆ ವಿಶಿಷ್ಟ ಸ್ಥಾನವಿದೆ. ಆದರೆ ಪ್ರಸ್ತುತ ಕಾಡುಗಳ ನಾಶ, ಆನೆಗಳ ಆವಾಸಸ್ಥಾನದ ಕೊರತೆ ಹಾಗೂ ಮಾನವ–ಆನೆ ಸಂಘರ್ಷಗಳು ಆತಂಕಕಾರಿ ಬೆಳವಣಿಗೆಯಾಗಿವೆ. ಇವುಗಳನ್ನು ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಸರ್ಕಾರವು ಆನೆಗಳ ಸಂಚಾರಕ್ಕೆ ಪ್ರಮುಖವಾಗಿರುವ ಆನೆ ಕಾರಿಡಾರ್‌ಗಳನ್ನು ಸಂರಕ್ಷಿಸುವುದರ ಜೊತೆಗೆ, ಅವುಗಳಿಗೆ ಸೂಕ್ತ ನೈಸರ್ಗಿಕ ವಾತಾವರಣ ಕಲ್ಪಿಸುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಲು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande