ಮೀನು ಕೃಷಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಗಂಗಾವತಿ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕುಷ್ಟಗಿ/ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಿಗೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನುಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವ
ಮೀನು ಕೃಷಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯಕ್ಕೆ ಅರ್ಜಿ ಆಹ್ವಾನ


ಗಂಗಾವತಿ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕುಷ್ಟಗಿ/ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಿಗೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನುಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕುಗಳ ಮೂಲಕ ಸಾಲದ ಸೌಲಭ್ಯ ಒದಗಿಸಿ, ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ಮೀನುಕೃಷಿಕರು ಆಗಸ್ಟ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಕುಷ್ಟಗಿ/ಗಂಗಾವತಿ, ಕನಕಗಿರಿ, ಹಾಗೂ ಕಾರಟಗಿ ತಾಲೂಕುಗಳ ಮೀನುಗಾರರು/ಮೀನುಕೃಷಿಕರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಗಂಗಾವತಿ ರವರನ್ನು ಸಂಪರ್ಕಿಸಿ, ನಿಗದಿತ ನಮೂನೆಯಲ್ಲಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೀನುಗಾರಿಕೆ ಮಾಡುತ್ತಿರುವ ಕುರಿತು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಿ, ಬ್ಯಾಂಕುಗಳಿಂದ ಆರ್ಥಿಕ ಸಹಾಯಧನ ಪಡೆಯಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande