
ನವದೆಹಲಿ, 12 ಆಗಸ್ಟ್ (ಹಿ.ಸ.):
ಆ್ಯಂಕರ್:ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಆಯೋಜಿಸಲಾದ ತಿರಂಗಾ ಯಾತ್ರೆಯಲ್ಲಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಯುವಕರು ಸೇರಿದಂತೆ ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರ ನಿರ್ಮಾಣದಲ್ಲಿ ಒಗ್ಗಟ್ಟಿನಿಂದ ಕೊಡುಗೆ ನೀಡುವಂತೆ ಕರೆ ನೀಡಿದರು.
ತಿರಂಗಾ ದೇಶದ ವೈವಿಧ್ಯತೆಯನ್ನು ಏಕತೆಯ ಸೂತ್ರದಲ್ಲಿ ಬಂಧಿಸುವ ಪ್ರತೀಕವಾಗಿದೆ. ರಾಷ್ಟ್ರಧ್ವಜವನ್ನು ಸಾಕ್ಷಿಯಾಗಿಸಿಕೊಂಡು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಲು ಪ್ರತಿಯೊಬ್ಬರೂ ತಮ್ಮನ್ನು ಸಮರ್ಪಿಸಿಕೊಳ್ಳಬೇಕು ಎಂದು ಶೇಖಾವತ್ ಹೇಳಿದರು.
ಸ್ವಾತಂತ್ರ್ಯದ 100 ವರ್ಷ ಪೂರ್ಣಗೊಳ್ಳುವ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಅಮರ ಸ್ವಾತಂತ್ರ್ಯ ಹೋರಾಟಗಾರರಿಗೆ ಸಲ್ಲಿಸುವ ನಿಜವಾದ ಗೌರವವೆಂದರೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ನಿರ್ಮಿಸುವ ಸಂಕಲ್ಪ ಕೈಗೊಂಡು ಅದಕ್ಕಾಗಿ ಒಗ್ಗಟ್ಟಿನಿಂದ ಶ್ರಮಿಸುವುದಾಗಿದೆ ಎಂದರು.
ತಿರಂಗಾ ಯಾತ್ರೆ ಕೇವಲ ರಾಷ್ಟ್ರಧ್ವಜದೊಂದಿಗೆ ನಡೆಯುವ ಕಾರ್ಯಕ್ರಮವಲ್ಲ. ಇದು ದೇಶದ ಏಕತೆ, ರಾಷ್ಟ್ರೀಯ ಹೆಮ್ಮೆ ಹಾಗೂ ನಾಗರಿಕ ಜವಾಬ್ದಾರಿಯ ಸಂದೇಶ ಸಾರುವ ಅಭಿಯಾನವಾಗಿದೆ. ಸ್ವಾತಂತ್ರ್ಯ ಹೋರಾಟದ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಜನರಲ್ಲಿ ಬಲಪಡಿಸುವ ಉದ್ದೇಶದಿಂದ ಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ವರ್ಷದ ಕಾರ್ಯಕ್ರಮಕ್ಕೆ ವಿಶೇಷ ಮಹತ್ವವಿದ್ದು, ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ದೇಶ ಆಚರಿಸುತ್ತಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ‘ವಂದೇ ಮಾತರಂ’ ಜನರಲ್ಲಿ ದೇಶಭಕ್ತಿ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಸ್ಫೂರ್ತಿ ಮೂಡಿಸಿತ್ತು. ಹೀಗಾಗಿ ತಿರಂಗಾ ಯಾತ್ರೆಯೊಂದಿಗೆ ‘ವಂದೇ ಮಾತರಂ’ನ 150ನೇ ವರ್ಷವನ್ನು ಸ್ಮರಿಸುವುದು ಹೊಸ ಪೀಳಿಗೆಯನ್ನು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳೊಂದಿಗೆ ಬೆಸೆಯುವ ಮಹತ್ವದ ಅವಕಾಶವಾಗಿದೆ ಎಂದರು.
‘ಹರ್ ಘರ್ ತಿರಂಗಾ’ ಅಭಿಯಾನದಡಿ ಆಗಸ್ಟ್ 9ರಿಂದ 15ರವರೆಗೆ ದೇಶಾದ್ಯಂತ ತಿರಂಗಾ ಯಾತ್ರೆಗಳನ್ನು ಆಯೋಜಿಸಲಾಗುತ್ತಿದ್ದು, ಕೇಂದ್ರ ಸಂಸ್ಕೃತಿ ಸಚಿವಾಲಯವು ನೋಡಲ್ ಸಚಿವಾಲಯವಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.