ದೇಶಭಕ್ತಿಯ ಜಾಗೃತಿಗಾಗಿ ಚಿಕ್ಕಮಗಳೂರಿನಲ್ಲಿ ಭವ್ಯ ತ್ರಿವರ್ಣ ಯಾತ್ರೆ
ಚಿಕ್ಕಮಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ದೇಶಭಕ್ತಿಯ ಜಾಗೃತಿ ಹಾಗೂ ಜನರಲ್ಲಿ ರಾಷ್ಟ್ರಾಭಿಮಾನ ಮೂಡಿಸುವ ಸಂಕಲ್ಪದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ‘ದೇಶಭಕ್ತರ ಬಳಗ’ದ ವತಿಯಿಂದ ಚಿಕ್ಕಮಗಳೂರಿನಲ್ಲಿ ಭವ್ಯ ತ್ರಿವರ್ಣ ಯಾತ್ರೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂ
ಯಾತ್ರೆಯಲ್ಲಿ ಭಾಗವಹಿಸಿದ ಸಿ.ಟಿ.ರವಿ


ಚಿಕ್ಕಮಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:

ದೇಶಭಕ್ತಿಯ ಜಾಗೃತಿ ಹಾಗೂ ಜನರಲ್ಲಿ ರಾಷ್ಟ್ರಾಭಿಮಾನ ಮೂಡಿಸುವ ಸಂಕಲ್ಪದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ‘ದೇಶಭಕ್ತರ ಬಳಗ’ದ ವತಿಯಿಂದ ಚಿಕ್ಕಮಗಳೂರಿನಲ್ಲಿ ಭವ್ಯ ತ್ರಿವರ್ಣ ಯಾತ್ರೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ‘ಹರ್ ಘರ್ ತಿರಂಗಾ’ ಅಭಿಯಾನದ ಆಶಯದಂತೆ ತಾಲೂಕು ಕಚೇರಿ ಆವರಣದಿಂದ ಆಜಾದ್ ಪಾರ್ಕ್‌ವರೆಗೆ 100 ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಯಾತ್ರೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಯಾತ್ರೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಿ.ಟಿ. ರವಿ, ಸಂವಿಧಾನಕ್ಕಿಂತ ಮಿಗಿಲಾದ ಮತ್ತೊಂದು ರಾಷ್ಟ್ರಗ್ರಂಥವಿಲ್ಲ, ತಿರಂಗಕ್ಕಿಂತ ಶ್ರೇಷ್ಠವಾದ ಮತ್ತೊಂದು ಧ್ವಜವಿಲ್ಲ ಹಾಗೂ ರಾಷ್ಟ್ರಗೀತೆಗೆ ಮಿಗಿಲಾದ ಮತ್ತೊಂದು ಗಾನವಿಲ್ಲ ಎಂದು ಹೇಳಿದರು.

ಕಳೆದ ಏಳು ದಶಕಗಳಲ್ಲಿ ದೇಶದಲ್ಲಿ 6,024ಕ್ಕೂ ಅಧಿಕ ಭಯೋತ್ಪಾದಕ ಚಟುವಟಿಕೆಗಳು ದಾಖಲಾಗಿವೆ. ಭಾರತದ ಏಕತೆ ಮತ್ತು ಸಾರ್ವಭೌಮತೆಯನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ದೇಶಭಕ್ತಿಯ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

2047ರ ವೇಳೆಗೆ ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ವಿಕಸಿತ ಭಾರತ ನಿರ್ಮಾಣದ ಕಾರ್ಯಗಳು ನಡೆಯುತ್ತಿವೆ. ದೇಶದ ಏಕತೆ, ಅಖಂಡತೆ ಮತ್ತು ರಾಷ್ಟ್ರಭಕ್ತಿಯ ಜಾಗೃತಿಗಾಗಿ ತ್ರಿವರ್ಣ ಯಾತ್ರೆ ಆಯೋಜಿಸಲಾಗಿದೆ ಎಂದು ಸಿ.ಟಿ. ರವಿ ಹೇಳಿದರು.

ಯಾತ್ರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಕಲ್ಮರುಡಪ್ಪ, ನಗರ ಮಂಡಲ ಅಧ್ಯಕ್ಷ ಪುಷ್ಪರಾಜು, ನಗರಸಭಾ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತಾ ರವಿ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರ ಹಾಗೂ ರವೀಂದ್ರ ಬೆಳವಾಡಿ, ನಿವೃತ್ತ ಯೋಧ ಮಂಜುನಾಥ್, ಜಿಲ್ಲಾ ವಕ್ತಾರ ಎಚ್.ಎಸ್. ಪುಟ್ಟಸ್ವಾಮಿ, ಮುಖಂಡ ಪ್ರೇಮ್ ಕುಮಾರ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಬ್ರಹ್ಮಕುಮಾರಿ ಸಂಸ್ಥೆಯ ಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಸದಸ್ಯರು ಹಾಗೂ ದೇಶಭಕ್ತರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande