ಮತದಾರರ ಪಟ್ಟಿ ಪರಿಷ್ಕರಣೆಗೆ ಇನ್ನೊಂದು ತಿಂಗಳು ಕಾಲಾವಕಾಶ ನೀಡಿ: ಕಾಂಗ್ರೆಸ್
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್:ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬೂತ್‌ಮಟ್ಟದ ಅಧಿಕಾರಿಗಳ ಮನೆ-ಮನೆ ಪರಿಶೀಲನೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ
ಕಾಂಗ್ರೆಸ್ ಪತ್ರ


ಬೆಂಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬೂತ್‌ಮಟ್ಟದ ಅಧಿಕಾರಿಗಳ ಮನೆ-ಮನೆ ಪರಿಶೀಲನೆಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಕೆಪಿಸಿಸಿ ಮಾಧ್ಯಮ ವಕ್ತಾರ ರಮೇಶ್ ಬಾಬು ಅವರು ಆ.11ರಂದು ಭಾರತದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವ ಮನವಿಯಲ್ಲಿ, ಮನೆ-ಮನೆ ಪರಿಶೀಲನಾ ಅವಧಿಯನ್ನು ಸೆ.17ರವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.

ರಾಜ್ಯದಲ್ಲಿ ಸುಮಾರು 1,08,97,530 ಮತದಾರರನ್ನು ಎಎಸ್‌ಡಿಡಿಒ ವರ್ಗದಲ್ಲಿ ಗುರುತಿಸಲಾಗಿದ್ದು, ಇದು ಒಟ್ಟು ಮತದಾರರ ಪೈಕಿ ಸುಮಾರು ಶೇ.20ರಷ್ಟಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಶೀಲನೆ ಮತ್ತು ತಿದ್ದುಪಡಿಗೆ ಅವಕಾಶ ನೀಡುವುದು ಅಗತ್ಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಲಭ್ಯವಿಲ್ಲದಿರುವುದನ್ನೇ ಅವರ ಹೆಸರನ್ನು ಕೈಬಿಡಲು ಆಧಾರವಾಗಿಸಬಾರದು. ಗೈರುಹಾಜರಾಗಿರುವ ಮತದಾರರ ಮನೆಗಳಿಗೆ ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಬಾಬು ಮನವಿ ಮಾಡಿದ್ದಾರೆ.

ಎಎಸ್‌ಡಿಡಿಒ ಅಥವಾ ಸ್ಥಳಾಂತರಿತ ವರ್ಗಕ್ಕೆ ಸೇರಿಸಿರುವ ಮತದಾರರಿಗೆ ತಮ್ಮ ವರ್ಗೀಕರಣವನ್ನು ಪ್ರಶ್ನಿಸಿ ತಿದ್ದುಪಡಿ ಮಾಡಿಕೊಳ್ಳಲು ಸೂಕ್ತ ಅವಕಾಶ ಕಲ್ಪಿಸಬೇಕು. ಪ್ರತಿ ಬೂತ್‌ನಲ್ಲಿ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಿ ಅಗತ್ಯ ನಮೂನೆಗಳು ಹಾಗೂ ಅಧಿಕಾರಿಗಳ ಸಂಪರ್ಕ ಮಾಹಿತಿ ಲಭ್ಯವಾಗುವಂತೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande