ಕೊಪ್ಪಳ : ದಸರಾ ಕ್ರೀಡಾಕೂಟ ಸಂಘಟನೆಗೆ ಅರ್ಜಿ ಆಹ್ವಾನ
ಕೊಪ್ಪಳ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026-27ನೇ ಸಾಲಿನ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದ್ದು, ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸಂಘಟಿಸಲು ಆಸಕ್ತ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಎನ್ಜಿಒಗಳಿಂದ ಅರ್ಜಿ
ಕೊಪ್ಪಳ : ದಸರಾ ಕ್ರೀಡಾಕೂಟ ಸಂಘಟನೆಗೆ ಅರ್ಜಿ ಆಹ್ವಾನ


ಕೊಪ್ಪಳ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026-27ನೇ ಸಾಲಿನ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದ್ದು, ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸಂಘಟಿಸಲು ಆಸಕ್ತ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಎನ್ಜಿಒಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯಾ ತಾಲೂಕುಗಳಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ಹೊಂದಿರುವ ಹಾಗೂ ಕ್ರೀಡಾಕೂಟಗಳ ಸಂಘಟನೆಯಲ್ಲಿ ಅನುಭವ ಹೊಂದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಸಂಸ್ಥೆಗಳು ತಮ್ಮ ತಾಲೂಕಿನಲ್ಲಿ ಉತ್ತಮ ಅಭಿವೃದ್ಧಿಪರ ಸಮುದಾಯಿಕ ಚಟುವಟಿಕೆಗಳು, ಸರ್ಕಾರಿ ಹಾಗೂ ಅರೆ ಸರ್ಕಾರಿ ಜಾಗೃತಿ ಕಾರ್ಯಕ್ರಮಗಳು ಮತ್ತು ವಿವಿಧ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಅನುಭವವನ್ನು ಹೊಂದಿರಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿಯಮಗಳು ಹಾಗೂ ಷರತ್ತುಗಳಿಗೆ ಬದ್ಧರಾಗಿ ದಸರಾ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಲು ಸಿದ್ಧವಿರುವ ಸಂಸ್ಥೆಗಳು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸುವ ಮುನ್ನ ಈ ಕುರಿತು ಅಗತ್ಯ ಮಾಹಿತಿಯನ್ನು ಇಲಾಖೆಯಿಂದ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಸ್ತಾವನೆಗಳನ್ನು ಆಗಸ್ಟ್ 24 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-230121 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande