
ಬಳ್ಳಾರಿ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ನೂತನವಾಗಿ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗಿದ್ದು, ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿಯ ಎ.ಪಿ.ಜೆ ಅಬ್ದುಲ್ ಕಲಾಂ ಶಾಲೆ, ಸಂಡೂರು ಹಾಗೂ ಕಂಪ್ಲಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಈ ಹೊಸ ಪಿಯುಸಿ ವಿಭಾಗಗಳು ಆರಂಭಗೊ0ಡಿವೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ‘ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ' ಇಲ್ಲಿಗೆ ಸಂಪರ್ಕಿಸಬಹುದು.
*ಸಂಪರ್ಕಿಸಬೇಕಾದ ಕಾಲೇಜುಗಳು ಮತ್ತು ಪ್ರಾಂಶುಪಾಲರ ವಿವರ:*
ಎ.ಪಿ.ಜೆ ಅಬ್ದುಲ್ ಕಲಾಂ ಶಾಲೆ, ಬಳ್ಳಾರಿ: ಪ್ರಾಂಶುಪಾಲ ಮುಕ್ಕಪ್ಪ (ಮೊ: 9844040035)
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸಂಡೂರು: ಪ್ರಾಂಶುಪಾಲ ವೀರೇಶ್ (ಮೊ: 9480933730)
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಂಪ್ಲಿ: ಪ್ರಾಂಶುಪಾಲ ಬಸವರಾಜ (ಮೊ: 7353346069)
*ಮಾಹಿತಿ ಕೇಂದ್ರಗಳ ದೂರವಾಣಿ ಸಂಖ್ಯೆ:*
ಬಳ್ಳಾರಿ: 08392-200125 / 224, ಮೊ: 8310321101
ಸಿರುಗುಪ್ಪ: 9148889975
ಸಂಡೂರು: 9036925966
ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್