ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ : ಅರ್ಜಿ ಆಹ್ವಾನ
ಕುಷ್ಟಗಿ, 12 ಆಗಸ್ಟ್ (ಹಿ.ಸ.) ಆ್ಯಂಕರ್ : 2026-27ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆ ಕಾರ್ಯಚಟುವಟಿಕೆಗಳ ಅನುಷ್ಠಾನ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರಪಿಸ್ಟ್ರ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ
ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ : ಅರ್ಜಿ ಆಹ್ವಾನ


ಕುಷ್ಟಗಿ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : 2026-27ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆ ಕಾರ್ಯಚಟುವಟಿಕೆಗಳ ಅನುಷ್ಠಾನ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರಪಿಸ್ಟ್ರ ಹುದ್ದೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಬಹು ವಿಧ ನ್ಯೂನ್ಯತೆ, ಸೆರೆಬ್ರಲ್ ಪಾಲ್ಸಿ ಹಾಗೂ ಇತರೆ ನ್ಯೂನ್ಯತೆವುಳ್ಳ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ನೀಡಲು ಅರ್ಹ ಫಿಜಿಯೋಥೆರೆಪಿಸ್ಟ್ನ್ನು ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುವುದು. ಅಂಗೀಕೃತ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆಗಳಿ0ದ ಬ್ಯಾಚುಲರ್ ಆಫ್ ಫಿಜಿಯೋಥೆರಪಿ (ಬಿ.ಪಿ.ಟಿ.) ಅಥವಾ ಡಿಪ್ಲೋಮಾ ಇನ್ ಫಿಜಿಯೋಥೆರಪಿ (ಡಿ.ಪಿ.ಟಿ.) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹರು ಆಗಸ್ಟ್ 19 ರೊಳಗೆ ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿ.ಆರ್.ಸಿ. ಕೇಂದ್ರ ಗಾಂಧಿನಗರ, ಕುಷ್ಟಗಿ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande