
ಬೆಂಗಳೂರು, 12 ಆಗಸ್ಟ್ (ಹಿ.ಸ.):
ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆ ಹಂಚಿಕೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸ ಖಾತೆ ಹಂಚಿಕೆ ತಕ್ಷಣದಿಂದ ಜಾರಿಗೆ ಬಂದಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು, ಸಚಿವ ಸಂಪುಟ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಗುಪ್ತಚರ, ಮಾಹಿತಿ, ಕಾನೂನು ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ, ಕೃಷಿ ಮಾರುಕಟ್ಟೆ, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಖಾತೆಗಳನ್ನು ಹೊಂದಿದ್ದಾರೆ. ಇದಲ್ಲದೆ, ಹಂಚಿಕೆಯಾಗದ ಎಲ್ಲ ಖಾತೆಗಳ ಜವಾಬ್ದಾರಿಯೂ ಮುಖ್ಯಮಂತ್ರಿಯವರಲ್ಲೇ ಇರಲಿದೆ.
ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ವಸತಿ, ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಪರಿಸರ ಮತ್ತು ಜೀವವೈವಿಧ್ಯ, ಲಕ್ಷ್ಮಣ ಸವದಿ ಅವರಿಗೆ ಕೃಷಿ ಮಾರುಕಟ್ಟೆ ಹೊರತುಪಡಿಸಿದ ಸಹಕಾರ, ರುದ್ರಪ್ಪ ಲಮಾಣಿ ಅವರಿಗೆ ಸಕ್ಕರೆ ಮತ್ತು ಜವಳಿ ಹಾಗೂ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ವಹಿಸಲಾಗಿದೆ.
ಶಿವರಾಜ ತಂಗಡಗಿ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ, ಯು.ಟಿ. ಖಾದರ್ ಅವರಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಟಿ. ರಘುಮೂರ್ತಿ ಅವರಿಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ನೀಡಲಾಗಿದೆ.
ಅಜಯ್ ಸಿಂಗ್ ಅವರಿಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ–ತಂತ್ರಜ್ಞಾನ, ಚೆಲುವರಾಯಸ್ವಾಮಿ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಬಸವರಾಜ ರಾಯರೆಡ್ಡಿ ಅವರಿಗೆ ಉನ್ನತ ಶಿಕ್ಷಣ ಹಾಗೂ ಶಿವಲಿಂಗೇಗೌಡ ಅವರಿಗೆ ಹಣಕಾಸು ಇಲಾಖೆಯಿಂದ ಅಬಕಾರಿ ಖಾತೆ ನೀಡಲಾಗಿದೆ.
ಪುಟ್ಟರಂಗ ಶೆಟ್ಟಿ ಅವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ, ವಿಜಯಾನಂದ ಕಾಶಪ್ಪನವರ್ ಅವರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳು, ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಮತ್ತು ಉದ್ಯೋಗ, ಕೆ.ಎಸ್. ಬಸವಂತಪ್ಪ ಅವರಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಖಾತೆ ಹಂಚಲಾಗಿದೆ.
ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ, ನರೇಂದ್ರಸ್ವಾಮಿ ಅವರಿಗೆ ಕೃಷಿ, ಎಚ್.ಸಿ. ಬಾಲಕೃಷ್ಣ ಅವರಿಗೆ ನಗರಾಡಳಿತ ಮತ್ತು ಬಿ. ನಾಗೇಂದ್ರ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಖಾತೆ ವಹಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.