
ಬೆಂಗಳೂರು, 12 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯದಾದ್ಯಂತ ಇಂದು ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ತಿಳಿಸಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.