ಎಸ್ಐಆರ್ ಪ್ರಕ್ರಿಯೆ ಚುರುಕು: 7.82 ಲಕ್ಷ ಎನ್ಯುಮರೇಷನ್ ಫಾರ್ಮ್ಗಳ ಡಿಜಿಟಲೀಕರಣ
ಗದಗ, 12 ಆಗಸ್ಟ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಮುಂದುವರಿದಿದ್ದು, ಆಗಸ್ಟ್ 10ರವರೆಗೆ ಒಟ್ಟು 7,82,053 ಎನ್ಯುಮರೇಷನ್ ಫಾರ್ಮ್ಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಲ್ಲಿ ಒಟ್ಟು 9,02
ಫೋಟೋ


ಗದಗ, 12 ಆಗಸ್ಟ್ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಮುಂದುವರಿದಿದ್ದು, ಆಗಸ್ಟ್ 10ರವರೆಗೆ ಒಟ್ಟು 7,82,053 ಎನ್ಯುಮರೇಷನ್ ಫಾರ್ಮ್ಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದು, 967 ಮತಗಟ್ಟೆಗಳು ಇವೆ. ಎಸ್ಐಆರ್ ಪ್ರಕ್ರಿಯೆಯ ಭಾಗವಾಗಿ ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಿ, ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಆಗಸ್ಟ್ 10ರವರೆಗೆ ಜಿಲ್ಲೆಯಾದ್ಯಂತ 9,02,947 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದೆ. ಈ ಪೈಕಿ 7,82,053 ಫಾರ್ಮ್ಗಳ ಡಿಜಿಟಲೀಕರಣ ಪೂರ್ಣಗೊಂಡಿದೆ. ಇದರಿಂದ ಎಸ್ಐಆರ್ ಪ್ರಕ್ರಿಯೆಯಲ್ಲಿ ಜಿಲ್ಲೆಯು ಗಮನಾರ್ಹ ಪ್ರಗತಿ ಸಾಧಿಸಿರುವುದು ಕಂಡುಬರುತ್ತಿದೆ.

ಬಿ.ಎಲ್.ಓಗಳು ಎನ್ಯುಮರೇಷನ್ ಫಾರ್ಮ್ಗಳೊಂದಿಗೆ ಮತದಾರರ ಮನೆ ಮನೆಗೆ ಭೇಟಿ ನೀಡುವ ಕಾರ್ಯವನ್ನು ಆಗಸ್ಟ್ 17, 2026ರವರೆಗೆ ಮುಂದುವರಿಸಲಿದ್ದಾರೆ. ಮತದಾರರು ಬಿ.ಎಲ್.ಓಗಳಿಗೆ ಅಗತ್ಯ ಮಾಹಿತಿಯನ್ನು ನೀಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರುಗಳು ತಪ್ಪದೇ ಇರುವಂತೆ ಹಾಗೂ ಅನರ್ಹ ಹೆಸರುಗಳು ಉಳಿಯದಂತೆ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮಾಹಿತಿಯನ್ನು ಪರಿಶೀಲಿಸಿಕೊಂಡು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande