
ವಿಜಯಪುರ, 12 ಆಗಸ್ಟ್ (ಹಿ.ಸ.)
ಆ್ಯಂಕರ್ : ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲೆಯ ಸಿಂದಗಿ ಮಂಡಲದ ವತಿಯಿಂದ ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ದಿನಗಳ ಪಕ್ಷದ ಚಟುವಟಿಕೆಗಳ ಕುರಿತು ಚರ್ಚಿಸಲು ಮಂಡಲ ಸಂಘಟನಾ ಸಭೆಯನ್ನು ಗುರುವಾರ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ರಮೇಶ್ ಬೂಸನೂರು ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರ ಸೂಚನೆಯಂತೆ ಪ್ರತಿ ಮಂಡಲದಲ್ಲಿ ಪ್ರತಿತಿಂಗಳು ಕಡ್ಡಾಯವಾಗಿ ಸಂಘಟನಾ ಸಭೆ ನಡೆಸುವ ಹಿನ್ನೆಲೆಯಲ್ಲಿ ಸಿಂದಗಿ ಮಂಡಲದಲ್ಲಿಯೂ ಈ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಸಭೆಯಲ್ಲಿ ಮಂಡಲದ ಸಂಘಟನಾ ಚಟುವಟಿಕೆಗಳ ಪ್ರಗತಿ, ಪಕ್ಷದ ವಿವಿಧ ಘಟಕಗಳ ಕಾರ್ಯವೈಖರಿ, ಬೂತ್ ಮಟ್ಟದ ಸಂಘಟನೆ ಬಲಪಡಿಸುವುದು, ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಸೇರಿದಂತೆ ಮುಂಬರುವ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಸಿಂದಗಿ ಬಿಜೆಪಿ ಮಂಡಲದ ಎಲ್ಲಾ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ವತಿಯಿಂದ ಸೂಚಿಸಲಾಗಿದೆ.
ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಸಾಧಿಸುವುದು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವ ಕುರಿತು ಸಭೆಯಲ್ಲಿ ಮಾರ್ಗದರ್ಶನ ನೀಡಲಾಗುತ್ತದೆ.
ಸಂಬಂಧಿಸಿದ ಎಲ್ಲಾ ಪದಾಧಿಕಾರಿಗಳು ಹಾಗೂ ಪ್ರಮುಖರು ಸಮಯಕ್ಕೆ ಸರಿಯಾಗಿ ಸಭೆಗೆ ಆಗಮಿಸಿ ಸಂಘಟನಾ ಬಲವರ್ಧನೆಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande