ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ
ಕೊಪ್ಪಳ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ಪ್ರಾಯೋಜಕತ್ವದಲ್ಲಿ ಉದ್ಯಮ ಆಕಾಂಕ್ಷಿಗಳಿಗಾಗಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉ
ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ


ಕೊಪ್ಪಳ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ಪ್ರಾಯೋಜಕತ್ವದಲ್ಲಿ ಉದ್ಯಮ ಆಕಾಂಕ್ಷಿಗಳಿಗಾಗಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಉದ್ಯಮಶೀಲತೆಗೆ ಪ್ರೇರಣೆ, ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಮತ್ತು ಪ್ರೋತ್ಸಾಹ, ಸ್ವಯಂ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಉದ್ಯಮ ನಿರ್ವಹಣೆ, ಉದ್ಯಮ ಆರಂಭದ ಹಂತಗಳು, ಸಾಲ ಸೌಲಭ್ಯಗಳು, ಜಾಹೀರಾತು ಮತ್ತು ಮಾರುಕಟ್ಟೆ, ನೋಂದಣಿ ವಿಧಾನಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.

ಅಲ್ಲದೆ, ಯಶಸ್ವಿ ಉದ್ಯಮಿಗಳೊಂದಿಗೆ ಸಂವಾದ ಹಾಗೂ ಉದ್ಯಮವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಧಾನಗಳ ಬಗ್ಗೆಯೂ ತರಬೇತಿ ನೀಡಲಾಗುತ್ತದೆ. ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20ರಿಂದ 45 ವರ್ಷ ವಯೋಮಾನದವರಾಗಿದ್ದು, ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ಆಗಸ್ಟ್ 17 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಷನ್ ಕಾರ್ಡ್ನ ಜೆರಾಕ್ಸ್ ಪ್ರತಿಗಳು ಹಾಗೂ ಮೂರು ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ಇವರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7204016012 ನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande