ನಾಳೆ ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತರಿಂದ ನಾಗರಿಕರ ಜೊತೆ ದೂರವಾಣಿ ಸಂವಾದ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್:ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಕುಂದುಕೊರತೆ, ಸಲಹೆ ಹಾಗೂ ವಿವಿಧ ನಾಗರಿಕ ಸಮಸ್ಯೆಗಳನ್ನು ಆಲಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ದೂರವಾಣಿ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ. ಆಗಸ್ಟ್ 13ರಂದು ಗುರುವಾರ
Phone in


ಬೆಂಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರ ಕುಂದುಕೊರತೆ, ಸಲಹೆ ಹಾಗೂ ವಿವಿಧ ನಾಗರಿಕ ಸಮಸ್ಯೆಗಳನ್ನು ಆಲಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ದೂರವಾಣಿ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.

ಆಗಸ್ಟ್ 13ರಂದು ಗುರುವಾರ ಸಂಜೆ 5ರಿಂದ 6 ಗಂಟೆಯವರೆಗೆ ದೂರವಾಣಿ ಮೂಲಕ ನಾಗರಿಕರೊಂದಿಗೆ ಸಂವಾದ ನಡೆಯಲಿದೆ. ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ನಿವಾಸಿಗಳು ತಮ್ಮ ಪ್ರದೇಶದ ನಾಗರಿಕ ಸಮಸ್ಯೆಗಳು, ಸಲಹೆಗಳು ಹಾಗೂ ಇತರ ಅಹವಾಲುಗಳನ್ನು ಆಯುಕ್ತರ ಗಮನಕ್ಕೆ ತರಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಆಯೋಜಿಸಿರುವ ಈ ದೂರವಾಣಿ ಸಂವಾದದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande