ಭಾರತ್ ಜೋಡೋ ನೋಂದಣಿಗೆ ವೆಬ್ಸೈಟ್ ಬಿಡುಗಡೆ
ಕೊಪ್ಪಳ, 12 ಆಗಸ್ಟ್ (ಹಿ.ಸ.) ಆ್ಯಂಕರ್ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ವೆಬ್ಸೈಟ್ ಬಿಡುಗಡೆ ಮಾಡಲಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ ತಿಳಿಸಿದ್ದಾರೆ. ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣಕ್ಕಾಗಿ ಸಮುದಾಯ ಅಭಿವ
ಭಾರತ್ ಜೋಡೋ ನೋಂದಣಿಗೆ ವೆಬ್ಸೈಟ್ ಬಿಡುಗಡೆ


ಕೊಪ್ಪಳ, 12 ಆಗಸ್ಟ್ (ಹಿ.ಸ.)

ಆ್ಯಂಕರ್ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ವೆಬ್ಸೈಟ್ ಬಿಡುಗಡೆ ಮಾಡಲಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡ್ರ ತಿಳಿಸಿದ್ದಾರೆ.

ವಿಕಾಸಶೀಲ ಹಾಗೂ ಸೌಹಾರ್ದಶೀಲ ಕರ್ನಾಟಕ ನಿರ್ಮಾಣಕ್ಕಾಗಿ ಸಮುದಾಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್ನೆಸ್ ಹಾಗೂ ಕೌಶಲ್ಯಾಭಿವೃದ್ಧಿ ಮೂಲಕ ಯುವಜನರನ್ನು ಸಬಲೀಕರಣಗೊಳಿಸಿ, ತಳಮಟ್ಟದ ಆಡಳಿತದಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ಗಳಲ್ಲಿ ಸಶಕ್ತ ಯುವಜನರನ್ನು ಒಳಗೊಂಡ ಬಲಿಷ್ಠ ಸಮುದಾಯಗಳನ್ನು ರೂಪಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಂಘ, ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 4,000 ಜನಸಂಖ್ಯೆಗೆ ಒಂದು ಸಂಘ, ಪುರಸಭೆಯಲ್ಲಿ 6,000 ಜನಸಂಖ್ಯೆಗೆ ಒಂದು ಸಂಘ ಹಾಗೂ ನಗರಸಭೆಯಲ್ಲಿ 8,000 ಜನಸಂಖ್ಯೆಗೆ ಒಂದು ಸಂಘವನ್ನು ಸ್ಥಾಪಿಸಬೇಕಾಗಿದೆ.

ಸಂಘದ ಸದಸ್ಯರಾಗಲು 16 ರಿಂದ 35 ವರ್ಷದೊಳಗಿನ ಯುವಜನರು ಅರ್ಹರಾಗಿರುತ್ತಾರೆ. ಭಾರತ್ ಜೋಡೋ ಯುವ ಸಂಘಗಳ ನೋಂದಣಿಯನ್ನು ವೆಬ್ಸೈಟ್ bjys.karnataka.gov.in ನಲ್ಲಿ ಆನ್ಲೈನ್ ಮೂಲಕ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ–583231, ದೂರವಾಣಿ: 08539-230121 ಸಂಪರ್ಕಿಸುವ0ತೆ ಯುವಜನರಿಗೆ ಕೋರಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande