ಕುಡಿಯುವ ನೀರಿನ ಸಮಸ್ಯೆಗೆ ತ್ವರಿತ ಸ್ಪಂದನೆ: ಜಿ. ಪರಮೇಶ್ವರ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯ ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳಿಗೆ ತುರ್ತು ಪರಿಹಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರ
DCM post


ಬೆಂಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ತುಮಕೂರು ಜಿಲ್ಲೆಯ ಆಯಾ ತಾಲ್ಲೂಕುಗಳ ತಹಶೀಲ್ದಾರ್‌ಗಳಿಗೆ ತುರ್ತು ಪರಿಹಾರ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ಅನುದಾನ ಲಭ್ಯವಿದ್ದರೂ ಕಾಮಗಾರಿ ಅಥವಾ ಪರಿಹಾರ ಕ್ರಮಗಳಲ್ಲಿ ವಿಳಂಬ ಮಾಡುವುದು, ಇಲ್ಲವೇ ಅನುದಾನ ಲಭ್ಯವಿಲ್ಲ ಎಂದು ಸುಳ್ಳು ಮಾಹಿತಿ ನೀಡುವುದು ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ತಲುಪಿಸುವುದೇ ಸರ್ಕಾರದ ಆದ್ಯತೆಯಾಗಿದ್ದು, ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande