ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ಮಾರಾಟಕ್ಕೆ ಒಂದು ವರ್ಷ ನಿಷೇಧ
ಬೆಂಗಳೂರು, 12 ಆಗಸ್ಟ್ (ಹಿ.ಸ.): ಆ್ಯಂಕರ್: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸರ್ಕಾರಿ ಅಧಿಸೂಚನೆ ಹೊರಡಿಸಿದೆ. ಆ
Notification


ಬೆಂಗಳೂರು, 12 ಆಗಸ್ಟ್ (ಹಿ.ಸ.):

ಆ್ಯಂಕರ್:

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸರ್ಕಾರಿ ಅಧಿಸೂಚನೆ ಹೊರಡಿಸಿದೆ.

ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ, 2006ರ ಸೆಕ್ಷನ್ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಗಳು, 2011ರ ನಿಯಮ 2.3.4ರ ಅಡಿಯಲ್ಲಿ ಈ ಅಧಿಸೂಚನೆಯನ್ನು ಆ.10ರಂದು ಹೊರಡಿಸಲಾಗಿದೆ. ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ರಾಜ್ಯಾದ್ಯಂತ ನಿಷೇಧ ಜಾರಿಯಲ್ಲಿರಲಿದೆ.

ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಹಾಗೂ ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯಾದ್ಯಂತ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಕರ್ನಾಟಕ ಸರ್ಕಾರ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande