ಬಳ್ಳಾರಿ : ಹರ್ ಘರ್ ತಿರಂಗಾ ರ್ಯಾಲಿ
ಬಳ್ಳಾರಿ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ `ಹರ್ ಘರ್ ತಿರಂಗಾ'' ಅಭಿಯಾನಕ್ಕೆ ಸ್ಪಂದಿಸಿರುವ ಬಳ್ಳಾರಿ ನಗರದ ಮಾಜಿ ಶಾಸಕರಾದ ಜಿ. ಸೋಮಶೇಖರರೆಡ್ಡಿ ಅವರು ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಧ್ವಜಾರ
Bellary: `Har Ghar Tiranga' rally


Bellary: `Har Ghar Tiranga' rally


ಬಳ್ಳಾರಿ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ `ಹರ್ ಘರ್ ತಿರಂಗಾ' ಅಭಿಯಾನಕ್ಕೆ ಸ್ಪಂದಿಸಿರುವ ಬಳ್ಳಾರಿ ನಗರದ ಮಾಜಿ ಶಾಸಕರಾದ ಜಿ. ಸೋಮಶೇಖರರೆಡ್ಡಿ ಅವರು ತಮ್ಮ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ, ಬಿಜೆಪಿ ಜಿಲ್ಲಾ ಘಟಕವು ಬಳ್ಳಾರಿ ನಗರದಲ್ಲಿ ಹಮ್ಮಿಕೊಂಡಿರುವ ತಿರಂಗಾ ರ್ಯಾಲಿಯಲ್ಲಿ ಗುರುವಾರ ಪಾಲ್ಗೊಂಡಿದ್ದಾರೆ.

ಬಳ್ಳಾರಿ ನಗರದ ಅಧಿದೇವತೆ ಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಆರಂಭವಾದ ಬಿಜೆಪಿ ಮುಖಂಡರು - ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ರ್ಯಾಲಿಯು ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರುಬೀದಿ ಮೂಲಕ ಎಚ್.ಆರ್. ಗವಿಯಪ್ಪ ವೃತ್ತದಲ್ಲಿ ಸಮಾರೋಪಗೊಂಡಿತು.

500 ಮೀಟರ್ ಉದ್ದದ ತ್ರಿವರ್ಣ ಧ್ವಜವನ್ನು ರ್ಯಾಲಿಯಲ್ಲಿ ಪ್ರದರ್ಶನ ಮಾಡಲಾಯಿತು. ರ್ಯಾಲಿ ಉದ್ದಕ್ಕೂ ದೇಶಪ್ರೇಮ, ರಾಷ್ಟ್ರಭಕ್ತಿಯ ಘೋಷಣೆಗಳನ್ನು ಕೂಗುತ್ತಾ ವಿದ್ಯಾರ್ಥಿಗಳು ಮತ್ತು ಪಕ್ಷದವರು ಸಾರ್ವಜನಿಕರ ಗಮನ ಸೆಳೆದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande