ರಾಹುಲ್ ಗಾಂಧಿ ಅಹಂಕಾರದಿಂದ ಮುಂಗಾರು ಸಂಸತ್ ಅಧಿವೇಶನ ಬಲಿ: ಬಿಜೆಪಿ
ನವದೆಹಲಿ, 13 ಆಗಸ್ಟ್ (ಹಿ.ಸ.): ಆ್ಯಂಕರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಹಂಕಾರ ಹಾಗೂ ಶಿಸ್ತಿನ ಕೊರತೆಯಿಂದ ಸಂಸತ್ತಿನ ಮುಂಗಾರು ಅಧಿವೇಶನದ ಕಲಾಪ ಬಲಿಯಾಗಿದೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಯಾವುದೇ
भाजपा सांसद रविशंकर प्रसाद


ನವದೆಹಲಿ, 13 ಆಗಸ್ಟ್ (ಹಿ.ಸ.):

ಆ್ಯಂಕರ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಹಂಕಾರ ಹಾಗೂ ಶಿಸ್ತಿನ ಕೊರತೆಯಿಂದ ಸಂಸತ್ತಿನ ಮುಂಗಾರು ಅಧಿವೇಶನದ ಕಲಾಪ ಬಲಿಯಾಗಿದೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವು ಯಾವುದೇ ವ್ಯಕ್ತಿಯ ಅಹಂಕಾರ ಅಥವಾ ಒತ್ತಡಕ್ಕೆ ಮಣಿಯುವುದಿಲ್ಲ. ಸಂಸತ್ತೂ ಇದೇ ತತ್ವದಡಿ ನಡೆಯಬೇಕು ಎಂದರು.

ನೀಟ್ ಪರೀಕ್ಷೆಯಲ್ಲಿನ ಅಕ್ರಮ ತಡೆಯಲು ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತಂದಿದ್ದು, ತ್ವರಿತಗತಿ ನ್ಯಾಯಾಲಯಗಳ ವ್ಯವಸ್ಥೆ ಮಾಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಸುಧಾರಣೆಗಾಗಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನೂ ರಚಿಸಲಾಗಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ತಮ್ಮ ಸಹೋದರಿಯೊಂದಿಗೆ ಅನುಮತಿಯಿಲ್ಲದೆ ಪ್ರಧಾನಮಂತ್ರಿ ನಿವಾಸದ ಗೇಟ್ ಬಳಿ ಕುಳಿತಿದ್ದರು. ಅವರೊಂದಿಗೆ ಮಾತುಕತೆಗೆ ಗೃಹ ಕಾರ್ಯದರ್ಶಿ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಮುಂದಾಗಿದ್ದರೂ, ಅವರು ರಾಜೀನಾಮೆಗೆ ಒತ್ತಾಯಿಸಿದರು ಎಂದು ಪ್ರಸಾದ್ ಆರೋಪಿಸಿದರು.

ಗುಂಡಿನ ದಾಳಿ ನಡೆದಿಲ್ಲ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧ ಪಕ್ಷ ಆಲಿಸಿದ್ದರೆ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗುತ್ತಿತ್ತು. ಆದರೆ ವಿರೋಧ ಪಕ್ಷವೇ ಸಂಸತ್ ಕಲಾಪ ನಡೆಯಲು ಅವಕಾಶ ನೀಡಲಿಲ್ಲ ಎಂದು ಅವರು ಟೀಕಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande