
ಬೆಂಗಳೂರು, 13 ಆಗಸ್ಟ್ (ಹಿ.ಸ.):
ಆ್ಯಂಕರ್:
ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿದ್ದ ಬಂದ್‌ನ್ನು ವಾಪಸ್ ಪಡೆದ ಕನ್ನಡಪರ ಸಂಘಟನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಬಂದ್ ವಾಪಸ್ ಪಡೆದಿರುವ ಎಲ್ಲ ಸಂಘಟನೆಗಳಿಗೆ ಧನ್ಯವಾದ ಅರ್ಪಿಸಿದರು.
ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಅವುಗಳನ್ನು ಪರಿಶೀಲಿಸುವುದಾಗಿ ಶಿವಕುಮಾರ್ ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.