ಗೊಂಡಬಾಳ, ಬೂದುಗುಂಪಾ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 13 ಆಗಸ್ಟ್ (ಹಿ.ಸ.) ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಿಗೆ ಗೊಂಡಬಾಳ ಮತ್ತು ಬೂದಗುಂಪಾದಲ್ಲಿ ಸುಸಜ್ಜಿತ ಬಾಡಿಗೆ ಕಟ್ಟಡಗಳನ್ನು ಒದಗಿಸಲು ಆಸಕ್ತ ಖಾಸಗಿ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಡಾ.
ಗೊಂಡಬಾಳ, ಬೂದುಗುಂಪಾ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 13 ಆಗಸ್ಟ್ (ಹಿ.ಸ.)

ಆ್ಯಂಕರ್: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಿಗೆ ಗೊಂಡಬಾಳ ಮತ್ತು ಬೂದಗುಂಪಾದಲ್ಲಿ ಸುಸಜ್ಜಿತ ಬಾಡಿಗೆ ಕಟ್ಟಡಗಳನ್ನು ಒದಗಿಸಲು ಆಸಕ್ತ ಖಾಸಗಿ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಗೊಂಡಬಾಳ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಬೂದಗುಂಪಾ, ಈ ಎರಡೂ ವಸತಿ ನಿಲಯಗಳ ಹಾಲಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು ನೆಲಸಮ ಮಾಡಲು ತೀರ್ಮಾನಿಸಲಾಗಿದೆ.

ಆದ್ದರಿಂದ ಈ ಎರಡು ವಸತಿ ನಿಲಯಗಳ ನಿರ್ವಹಣೆಗಾಗಿ ಆಯಾ ಸ್ಥಳಗಳಲ್ಲಿಯೇ (ಗೊಂಡಬಾಳ ಮತ್ತು ಬೂದಗುಂಪಾ) ತಲಾ 150 ವಿದ್ಯಾರ್ಥಿಗಳಿಗೆ ಸ್ಥಳಾವಕಾಶ, ಕನಿಷ್ಠ 10 ಶೌಚಾಲಯ ಹಾಗೂ 10 ಸ್ನಾನಗೃಹಗಳನ್ನು ಹೊಂದಿರುವ ಸುಸಜ್ಜಿತ ಬಾಡಿಗೆ ಕಟ್ಟಡಗಳ ಅವಶ್ಯಕತೆಯಿದ್ದು, ಆಸಕ್ತ ಖಾಸಗಿ ಕಟ್ಟಡ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಹೊಸಪೇಟೆ ರಸ್ತೆಯ ಹೊಸ ಆರ್.ಟಿ.ಓ ಕಛೇರಿ ಹತ್ತಿರದ ಸಹಾಯಕ ನಿರ್ದೇಶಕರು ಗೇಡ್-1, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande