ಆ.೨೦ರಂದು ಟಣಕನಕಲ್ ಐಟಿಐ ಸಂಸ್ಥೆಗೆ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನ
ಕೊಪ್ಪಳ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಟಣಕನಕಲ್ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾತ್ಕಾಲಿಕ ಅತಿಥಿ ಬೋಧಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗಾಗಿ ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಸಂಸ್ಥೆಯ ಎಂ.ಎಂ.ವಿ. ವಿಭಾಗದಲ
ಆ.೨೦ರಂದು ಟಣಕನಕಲ್ ಐಟಿಐ ಸಂಸ್ಥೆಗೆ ಅತಿಥಿ ಬೋಧಕರ ಹುದ್ದೆಗೆ ನೇರ ಸಂದರ್ಶನ


ಕೊಪ್ಪಳ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಕೊಪ್ಪಳ ತಾಲ್ಲೂಕಿನ ಟಣಕನಕಲ್ನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ತಾತ್ಕಾಲಿಕ ಅತಿಥಿ ಬೋಧಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗಾಗಿ ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಸಂಸ್ಥೆಯ ಎಂ.ಎಂ.ವಿ. ವಿಭಾಗದಲ್ಲಿ ತುರ್ತು ಅಗತ್ಯವಿರುವ ಮೋಟಾರ್ ವೈಕಲ್ ಮೆಕ್ಯಾನಿಕ್ ವೃತ್ತಿಗೆ ಒಬ್ಬ ಅತಿಥಿ ಬೋಧಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಮೋಟಾರ್ ವೈಕಲ್ ಮೆಕ್ಯಾನಿಕ್ ವೃತ್ತಿಯಲ್ಲಿ ಐ.ಟಿ.ಐ. ಉತ್ತೀರ್ಣರಾಗಿ ಅಪ್ರೆಂಟಿಶಿಪ್ ಪೂರ್ಣಗೊಳಿಸಿರಬೇಕು. ಅಥವಾ ಡಿಪ್ಲೊಮಾ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಉತ್ತೀರ್ಣರಾಗಿದ್ದು, ಕನಿಷ್ಠ ಎರಡು ವರ್ಷಗಳ ಬೋಧನಾ ಅಥವಾ ಕೈಗಾರಿಕಾ ಕ್ಷೇತ್ರದ ಅನುಭವ ಹೊಂದಿರಬೇಕು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು ಮತ್ತು ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಆಗಸ್ಟ್ 20ರಂದು ಬೆಳಿಗ್ಗೆ 11 ಗಂಟೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಟಣಕನಕಲ್, ಕುಷ್ಟಗಿ ರಸ್ತೆ, ಕೊಪ್ಪಳ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7483165641 ಅಥವಾ 9986707080 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande