ಆಗಸ್ಟ್ 18 ರಂದು ಮಹನೀಯರ ಜಯಂತಿ ಪೂರ್ವಭಾವಿ ಸಭೆ
ಕೊಪ್ಪಳ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನುಲಿಯ ಚಂದಯ್ಯ ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಆಗಸ್ಟ್ 18 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್
ಆಗಸ್ಟ್ 18 ರಂದು ಮಹನೀಯರ ಜಯಂತಿ ಪೂರ್ವಭಾವಿ ಸಭೆ


ಕೊಪ್ಪಳ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ನುಲಿಯ ಚಂದಯ್ಯ ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆಯನ್ನು ಆಗಸ್ಟ್ 18 ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ವಹಿಸುವರು. ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು ಸಭೆಗೆ ತಪ್ಪದೇ ಹಾಜರಾಗಬೇಕು ಹಾಗೂ ಸಮಾಜದ ಮುಖಂಡರು ಈ ಸಭೆಯಲ್ಲಿ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande