ಅಮೀನಗಡ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ
ಬಾಗಲಕೋಟೆ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ, ಕಚೇರಿಯ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರ
ಲೋಕ ದಾಳಿ


ಬಾಗಲಕೋಟೆ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಹುನಗುಂದ ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ, ಕಚೇರಿಯ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲನೆ ನಡೆಸಿದರು.

ಪಟ್ಟಣ ಪಂಚಾಯಿತಿಯಲ್ಲಿ ಇ-ಸ್ವತ್ತು, ಎನ್ಒಸಿ ಹಾಗೂ ಕಟ್ಟಡ ನಿರ್ಮಾಣ ಅನುಮತಿ ನೀಡುವ ಸಂದರ್ಭದಲ್ಲಿ ಲಂಚದ ಬೇಡಿಕೆ, ಸಾರ್ವಜನಿಕರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡುವುದು, ನಿಯಮಗಳನ್ನು ಉಲ್ಲಂಘಿಸಿ ನಿವೇಶನ ಸೃಷ್ಟಿಸುವುದು ಸೇರಿದಂತೆ ಹಲವು ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಲೋಕಾಯುಕ್ತಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು ಎಂದು ತಿಳಿದುಬಂದಿದೆ.

ಅದರ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಅಮೀನಗಡ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಶೋಧ ಕಾರ್ಯ ಕೈಗೊಂಡರು. ಅಧಿಕಾರಿಗಳು ಕಚೇರಿಯ ವಿವಿಧ ವಿಭಾಗಗಳಲ್ಲಿನ ಕಡತಗಳು, ದಾಖಲೆಗಳು ಹಾಗೂ ಸಂಬಂಧಿತ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದರು.

ವಿಶೇಷವಾಗಿ ವಾಣಿಜ್ಯ ಉದ್ದೇಶಕ್ಕೆ ಡಿಜಿಟಲ್ ಉತಾರೆ ನೀಡಿರುವುದು, ನಕಲಿ ಹಕ್ಕುಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ನಿವೇಶನಗಳ ಸೃಷ್ಟಿ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕಿದರು.

ಇ-ಸ್ವತ್ತು ಹಾಗೂ ಎನ್ಒಸಿ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯವಿರುವ ದಾಖಲೆಗಳನ್ನು ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚದ ಬೇಡಿಕೆ ಇಟ್ಟಿದ್ದಾರೆಯೇ, ಅರ್ಜಿದಾರರ ಕೆಲಸಗಳನ್ನು ನಿಯಮಬದ್ಧವಾಗಿ ಮತ್ತು ನಿಗದಿತ ಅವಧಿಯಲ್ಲಿ ಮಾಡಲಾಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ ಅವರ ಮಾರ್ಗದರ್ಶನದಲ್ಲಿ ಡಿಎಸ್ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ಪಿಐಗಳಾದ ವಿ.ಎನ್. ಕಡಿ, ಎಂ.ಬಿ. ಬಿರಾದಾರ ಹಾಗೂ ಎನ್.ಆರ್. ಖಿಲಾರೆ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande