ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಭೆ
ಮುನಿರಾಬಾದ್, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಗಸ್ಟ್ 17ರಂದು ಬೆಳಿಗ
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಭೆ


ಮುನಿರಾಬಾದ್, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಗಸ್ಟ್ 17ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ಸಾಮಾನ್ಯವಾಗಿ ಪ್ರತಿ ತಿಂಗಳ 3ನೇ ಶನಿವಾರದಂದು ಈ ಸಭೆ ನಡೆಯುತ್ತಿತ್ತು. ಆದರೆ ಈ ಬಾರಿ ಆ ದಿನದಂದು (ಆಗಸ್ಟ್ 15) ಸ್ವಾತಂತ್ರ್ಯ ದಿನಾಚರಣೆ ಇದ್ದ ಕಾರಣ, ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆ. 17ಕ್ಕೆ ನಿಗದಿಪಡಿಸಲಾಗಿದೆ.

ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತಿಗಳಾದ ಮುನಿರಾಬಾದ್ ಗಾ.ಪಂ., ಹುಲಿಗಿ, ಹಿಟ್ನಾಳ, ಅಗಳಕೇರಾ, ಶಿವಪುರ, ಗಿಣಿಗೇರಾ, ಹಿರೇಬಗನಾಳ, ಕುಣಿಕೇರಾ, ಕಲ್ತಾವರಗೇರಾ, ಬಂಡಿಹರ್ಲಾಪುರ, ಬೂದುಗುಂಪಾ, ಗುಳದಳ್ಳಿ, ಬೇವಿನಹಳ್ಳಿ, ಇಂದರಗಿ, ಹೊಸಳ್ಳಿ ಮತ್ತು ವನ ಬಳ್ಳಾರಿ ಗ್ರಾಮ ಪಂಚಾಯತಿಗಳ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಜೆಸ್ಕಾಂ ಮುನಿರಾಬಾದ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande