
ಕೊಪ್ಪಳ, 13 ಆಗಸ್ಟ್ (ಹಿ.ಸ.)
ಆ್ಯಂಕರ್ : 2026-27ನೇ ಸಾಲಿನಲ್ಲಿ ವಿಶೇಷ ಚೇತನ ಮಕ್ಕಳಿಗೆ ಫಿಜಿಯೋಥೆರಪಿ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಫಿಜಿಯೋಥೆರಪಿಸ್ಟ್ರ 01 ಹುದ್ದೆ ಹಾಗೂ ಎಸ್.ಆರ್.ಪಿ. ಕೇಂದ್ರದ ವೈದ್ಯರಿಗೆ ಸಹಾಯ ಮಾಡಲು 01 ಮಹಿಳಾ ಸಹಾಯಕಿ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳ ನೇಮಕಾತಿಯು ಆಗಸ್ಟ್ 2026ರಿಂದ ಮಾರ್ಚ್ 2027ರವರೆಗೆ ಮಾತ್ರ ಅನ್ವಯವಾಗಲಿದೆ. ಫಿಜಿಯೋಥೆರಪಿಸ್ಟ್ ಹುದ್ದೆಗೆ ಬ್ಯಾಚುಲರ್ ಆಫ್ ಫಿಜಿಯೋಥೆರಪಿ (ಬಿಪಿಟಿ) ಅಥವಾ ಡಿಪ್ಲೋಮಾ ಇನ್ ಫಿಜಿಯೋಥೆರಪಿ (ಡಿಪಿಟಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಇದೇ ಆಗಸ್ಟ್ 19ರ ಸಂಜೆ 5.30 ಗಂಟೆಯೊಳಗಾಗಿ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಕೊಪ್ಪಳ, ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9448746612, 8217687490 ಹಾಗೂ 9880713829 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್