ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದವರು ಕೂಡಲೇ ಗಣತಿ ನಮೂನೆ ಸಲ್ಲಿಸಿ ಸೂಚನೆ
ಮುನಿರಾಬಾದ್, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವವರು ಕೂಡಲೇ ಗಣತಿ ನಮೂನೆ ಭರ್ತಿ ಮಾಡಿ ಅಗತ್ಯ ಮಾಹಿತಿ ಸಲ್ಲಿಸಬೇಕು ಎಂದು ಕೊಪ್ಪಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾ
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದವರು ಕೂಡಲೇ ಗಣತಿ ನಮೂನೆ ಸಲ್ಲಿಸಿ


ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದವರು ಕೂಡಲೇ ಗಣತಿ ನಮೂನೆ ಸಲ್ಲಿಸಿ


ಮುನಿರಾಬಾದ್, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಂಗವಾಗಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದೇ ಇರುವವರು ಕೂಡಲೇ ಗಣತಿ ನಮೂನೆ ಭರ್ತಿ ಮಾಡಿ ಅಗತ್ಯ ಮಾಹಿತಿ ಸಲ್ಲಿಸಬೇಕು ಎಂದು ಕೊಪ್ಪಳ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಕರೆ ನೀಡಿದರು.

ಮುನಿರಾಬಾದ್ ಡ್ಯಾಂ ಗ್ರಾಮ ಪಂಚಾಯಿತಿಯ ವತಿಯಿಂದ ಆಗಸ್ಟ್ 13ರಂದು ಬಿ.ಹೊಸಳ್ಳಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈಗಾಗಲೇ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಎಸ್ಐಆರ್ ಪ್ರಕ್ರಿಯೆ ನಡೆಸಿದ್ದಾರೆ. ವಲಸೆ ಹೋಗಿರುವವರು ಹಾಗೂ ಈವರೆಗೆ ಗಣತಿ ನಮೂನೆ ಭರ್ತಿ ಮಾಡದವರು ಕೂಡಲೇ ನಮೂನೆ ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಎಎಸ್ಎಸ್ಡಿ ಪಟ್ಟಿಯನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಓದಿದರು.

ವಿಬಿಜಿರಾಮ್ ಜೀ ಯೋಜನೆಯಡಿ 125 ದಿನಗಳ ಕೆಲಸ: ಗ್ರಾಮೀಣ ಪ್ರದೇಶದ ಕೂಲಿಕಾರರು ಗುಳೆ ಹೋಗುವುದನ್ನು ತಡೆದು, ಪ್ರತಿ ಕುಟುಂಬಕ್ಕೆ ಸ್ಥಳೀಯವಾಗಿಯೇ 125 ದಿನಗಳ ಕೂಲಿ ಕೆಲಸ ಒದಗಿಸುವುದು ವಿಬಿಜಿರಾಮ್ ಜೀ ಯೋಜನೆಯ ಉದ್ದೇಶವಾಗಿದೆ. ಯೋಜನೆಯಡಿ ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನಿಗದಿಪಡಿಸಲಾಗಿದೆ. ಜಲ ಸಂರಕ್ಷಣೆ, ನೀರಾವರಿ, ಅಂತರ್ಜಲ ಮರುಪೂರಣ, ಜಲಾನಯನ ಪ್ರದೇಶಗಳ ಅಭಿವೃದ್ಧಿ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.

‘ವಿಕಸಿತ ಗ್ರಾಮ ಪಂಚಾಯತಿಯಿಂದ ವಿಕಸಿತ ಭಾರತದೆಡೆಗೆ’ ಎಂಬ ಯೋಜನೆಯ ಉದ್ದೇಶ ಈಡೇರಿಸಲು ಎಲ್ಲರೂ ಸಹಕರಿಸಬೇಕು. ಪ್ರಸಕ್ತ ಪ್ರತಿ ಮಾನವ ದಿನಕ್ಕೆ ರೂ.382 ಕೂಲಿ ನಿಗದಿಪಡಿಸಲಾಗಿದ್ದು, ಕೂಲಿಕಾರರು ಅಳತೆಗೆ ಅನುಗುಣವಾಗಿ ಕೆಲಸ ನಿರ್ವಹಿಸಬೇಕು. ಕೂಲಿ ಹಣವನ್ನು ಮಾಡಿದ ಕೆಲಸದ ಅಳತೆಗೆ ಅನುಗುಣವಾಗಿ ಪಾವತಿಸಲಾಗುತ್ತದೆ ಎಂದು ಹೇಳಿದರು.

ವೈಯಕ್ತಿಕ ಕಾಮಗಾರಿಗಳಾದ ಜಾನುವಾರು ಶೆಡ್, ಮೇಕೆ ಶೆಡ್, ಕೃಷಿಹೊಂಡ, ಬದು ನಿರ್ಮಾಣ, ಕೋಳಿ ಶೆಡ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಂಡು 125 ದಿನಗಳ ಕೆಲಸ ನಿರ್ವಹಿಸಬೇಕು. ಜಮೀನು ಇಲ್ಲದವರು ಗ್ರಾಮ ಪಂಚಾಯಿತಿಯಿಂದ ಕೈಗೊಳ್ಳುವ ಸಾಮೂಹಿಕ ಕಾಮಗಾರಿಗಳಲ್ಲಿ ಕೂಲಿ ಕೆಲಸ ನಿರ್ವಹಿಸಿ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.

ಹೊಸದಾಗಿ ನೋಂದಣಿಯಾದ ಕುಟುಂಬಗಳಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕಿ (ಗ್ರಾಉ) ಸೌಮ್ಯ ಕೆ., ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಂಯೋಜಕ ಯಮನೂರ, ತಾಂತ್ರಿಕ ಸಹಾಯಕ ಪ್ರಕಾಶ ಸಜ್ಜನ, ಬೇರ್ಫೂಟ್ ಟೆಕ್ನಿಷಿಯನ್ ರಾಮಣ್ಣ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande