ಸಿಂದಗಿ ಕೆರೆ ಲೈಟಿಂಗ್ಸ್ ಉದ್ಘಾಟನೆ: ಶಾಸಕ ಅಶೋಕ್ ಮನಗೂಳಿ ಸ್ಥಳ ಪರಿಶೀಲನೆ
ವಿಜಯಪುರ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನೂತನವಾಗಿ ಅಳವಡಿಸಲಾಗಿರುವ ಕೆರೆ ಲೈಟಿಂಗ್ಸ್ಗಳ ಉದ್ಘಾಟನಾ ಕಾರ್ಯಕ್ರಮ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸ
ಲೈಟ್


ವಿಜಯಪುರ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನೂತನವಾಗಿ ಅಳವಡಿಸಲಾಗಿರುವ ಕೆರೆ ಲೈಟಿಂಗ್ಸ್ಗಳ ಉದ್ಘಾಟನಾ ಕಾರ್ಯಕ್ರಮ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಕೆರೆ ಸುತ್ತಮುತ್ತ ಅಳವಡಿಸಲಾಗಿರುವ ನೂತನ ಲೈಟಿಂಗ್ಸ್ ವ್ಯವಸ್ಥೆ, ಉದ್ಘಾಟನಾ ಕಾರ್ಯಕ್ರಮದ ವೇದಿಕೆ, ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಲಾಗುತ್ತಿರುವ ವ್ಯವಸ್ಥೆಗಳು ಸೇರಿದಂತೆ ವಿವಿಧ ಸಿದ್ಧತೆಗಳನ್ನು ಶಾಸಕ ಅಶೋಕ್ ಮನಗೂಳಿ ಅವರು ಸ್ಥಳದಲ್ಲೇ ಪರಿಶೀಲಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಅಶೋಕ್ ಮನಗೂಳಿ ಅವರು ಚರ್ಚೆ ನಡೆಸಿ, ನಾಳೆಯ ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಲಹೆ–ಸೂಚನೆಗಳನ್ನು ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ ಕಾರ್ಯಕ್ರಮದ ಸುವ್ಯವಸ್ಥಿತ ನಿರ್ವಹಣೆ, ಸಾರ್ವಜನಿಕರ ಸುರಕ್ಷತೆ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದರು.

ಸಿಂದಗಿ ನಗರದ ಸೌಂದರ್ಯೀಕರಣಕ್ಕೆ ಹಾಗೂ ಸಾರ್ವಜನಿಕರಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕೆರೆ ಲೈಟಿಂಗ್ಸ್ ವ್ಯವಸ್ಥೆ ಪ್ರಮುಖ ಆಕರ್ಷಣೆಯಾಗಲಿದೆ. ಕೆರೆ ಪ್ರದೇಶವು ರಾತ್ರಿ ವೇಳೆಯಲ್ಲಿಯೂ ಸುಂದರವಾಗಿ ಕಂಗೊಳಿಸುವುದರಿಂದ ಸಾರ್ವಜನಿಕರಿಗೆ ವಾಯುವಿಹಾರ ಹಾಗೂ ಮನರಂಜನೆಗೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ನೂತನ ಕೆರೆ ಲೈಟಿಂಗ್ಸ್ ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಶಾಸಕ ಅಶೋಕ್ ಮನಗೂಳಿ ಅವರು ಮನವಿ ಮಾಡಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande