ವಿಜಯಪುರದಲ್ಲಿ ಯತ್ನಾಳರಿಂದ ₹9.10 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ವಿಜಯಪುರ, 13 ಆಗಸ್ಟ್ (ಹಿ.ಸ.) ಆ್ಯಂಕರ್ : ಕೇಂದ್ರದ ಮಾಜಿ ಸಚಿವರು ಹಾಗೂ ವಿಜಯಪುರ ನಗರದ ಶಾಸಕರಾದ ಬಸನಗೌಡ ರಾ. ಪಾಟೀಲ ಯತ್ನಾಳ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಭೂಮಿಪೂಜ
ಪೂಜೆ


ವಿಜಯಪುರ, 13 ಆಗಸ್ಟ್ (ಹಿ.ಸ.)

ಆ್ಯಂಕರ್ : ಕೇಂದ್ರದ ಮಾಜಿ ಸಚಿವರು ಹಾಗೂ ವಿಜಯಪುರ ನಗರದ ಶಾಸಕರಾದ ಬಸನಗೌಡ ರಾ. ಪಾಟೀಲ ಯತ್ನಾಳ ಅವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಹಾಗೂ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಭೂಮಿಪೂಜೆ ನೆರವೇರಿಸಿದರು.

ನಗರದ ವಿವಿಧ ವಾರ್ಡ್ಗಳಲ್ಲಿ ಒಟ್ಟು ₹9.10 ಕೋಟಿ ಮೊತ್ತದ ರಸ್ತೆ, ಒಳಚರಂಡಿ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ದೊರೆಯಿತು. ಅಭಿವೃದ್ಧಿ ಕಾಮಗಾರಿಗಳ ಮೂಲಕ ನಗರದ ಮೂಲಸೌಕರ್ಯವನ್ನು ಮತ್ತಷ್ಟು ಸುಧಾರಿಸುವ ಉದ್ದೇಶ ಹೊಂದಲಾಗಿದೆ.

ಮಧ್ಯಾಹ್ನ 12 ಗಂಟೆಗೆ ವಾರ್ಡ್ ನಂ.5ರ ಅಂಚೆ ಕಾಲೊನಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಆಂತರಿಕ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಯತ್ನಾಳ ಅವರು ಭೂಮಿಪೂಜೆ ನೆರವೇರಿಸಿದರು. ಈ ಕಾಮಗಾರಿಯಿಂದ ಕಾಲೊನಿಯ ನಿವಾಸಿಗಳಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಮಳೆಗಾಲದಲ್ಲಿ ಉಂಟಾಗುವ ಸಂಚಾರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ತಿಳಿಸಲಾಯಿತು.

ನಂತರ ಮಧ್ಯಾಹ್ನ 12.30ಕ್ಕೆ ವಾರ್ಡ್ ನಂ.4ರ ಎಂ.ಬಿ. ಪಾಟೀಲ ನಗರದ ಬಿ ಬ್ಲಾಕ್ನಲ್ಲಿ ₹1 ಕೋಟಿ ವೆಚ್ಚದಲ್ಲಿ ಆಂತರಿಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಹನುಮಾನ ದೇವಸ್ಥಾನದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಮಧ್ಯಾಹ್ನ 1 ಗಂಟೆಗೆ ಎಂ.ಬಿ. ಪಾಟೀಲ ನಗರದ ಸಿ ಬ್ಲಾಕ್ನ 25ನೇ ಕ್ರಾಸ್ನಲ್ಲಿ ₹1 ಕೋಟಿ ವೆಚ್ಚದಲ್ಲಿ ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರದೇಶದ ಒಳಚರಂಡಿ ವ್ಯವಸ್ಥೆ ಸುಧಾರಿಸಿ, ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸಂಜೆ 6 ಗಂಟೆಗೆ ವಾರ್ಡ್ ನಂ.5ರ ಆದರ್ಶ ನಗರದಲ್ಲಿ ₹6.50 ಕೋಟಿ ವೆಚ್ಚದಲ್ಲಿ ಆಂತರಿಕ ಒಳಚರಂಡಿ ಹಾಗೂ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಹನುಮಾನ ದೇವಸ್ಥಾನ ಹಾಗೂ ಪಾಟೀಲ ಗಾರ್ಡೆನಿಯಾ ಸಮೀಪ ನಡೆಯಲಿರುವ ಈ ಕಾಮಗಾರಿ ನಗರದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಲ್ಲಿ ಒಂದಾಗಿದೆ.

ಸಂಜೆ 6.30ಕ್ಕೆ ಶ್ರೀನಗರ ಕಾಲೊನಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ಗಾನಯೋಗಿ ಪಂಚಾಕ್ಷರಿ ಪ್ರತಿಷ್ಠಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಈ ಕಟ್ಟಡ ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.

ನಂತರ ಸಂಜೆ 7 ಗಂಟೆಗೆ ವಾರ್ಡ್ ನಂ.5ರ ಮಲ್ಲಿಕಾರ್ಜುನ ನಗರದ ಶ್ರೀ ಶಿವಾಲಯ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಯತ್ನಾಳ ಅವರು ಭಾಗವಹಿಸಿದರು. ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ಮಾಜಿ ಹಾಗೂ ಹಾಲಿ ಸದಸ್ಯರು, ವಿವಿಧ ಮುಖಂಡರು, ಹಿತೈಷಿಗಳು, ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳಿಗೆ ಶೋಭೆ ತಂದರು.

ನಗರದ ವಿವಿಧ ಪ್ರದೇಶಗಳಲ್ಲಿ ರಸ್ತೆ ಮತ್ತು ಒಳಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಮಂಜೂರಾದ ಕಾಮಗಾರಿಗಳನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಶಾಶ್ವತ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾರ್ಯಕ್ರಮದಲ್ಲಿ ಮುಖಂಡ ಭೀಮ್ ಮಾಧ್ಯಾಳ ಹೇಳಿದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande