ಬಸವನಬಾಗೇವಾಡಿಯಲ್ಲಿ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ
ವಿಜಯಪುರ, 14 ಆಗಸ್ಟ್ (ಹಿ.ಸ.) ಆ್ಯಂಕರ್ : ಪವಿತ್ರ ಶ್ರಾವಣ ಮಾಸದ ಅಂಗವಾಗಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ಪ್ರವಚನ ಕಾರ್ಯಕ್ರಮವನ್ನು ಶಾಸಕ ಶಿವಾನಂದ ಪಾಟೀಲ್ ಉದ್ಘಾಟಿಸಿದ
ಪೂಜೆ


ವಿಜಯಪುರ, 14 ಆಗಸ್ಟ್ (ಹಿ.ಸ.)

ಆ್ಯಂಕರ್ : ಪವಿತ್ರ ಶ್ರಾವಣ ಮಾಸದ ಅಂಗವಾಗಿ ವಿಜಯಪುರ ಜಿಲ್ಲೆಯ

ಬಸವನಬಾಗೇವಾಡಿಯಲ್ಲಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ಪ್ರವಚನ ಕಾರ್ಯಕ್ರಮವನ್ನು ಶಾಸಕ ಶಿವಾನಂದ ಪಾಟೀಲ್ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಶಾಸಕ ಶಿವಾನಂದ ಪಾಟೀಲ್, ಶ್ರಾವಣ ಮಾಸವು ಧಾರ್ಮಿಕ ಹಾಗೂ ಆಧ್ಯಾತ್ಮಿಕವಾಗಿ ಅತ್ಯಂತ ಮಹತ್ವದ ಅವಧಿಯಾಗಿದ್ದು, ಇಂತಹ ಸಂದರ್ಭದಲ್ಲಿ ಪ್ರವಚನ, ಭಜನೆ, ಧಾರ್ಮಿಕ ಚಿಂತನೆಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ಸಾತ್ವಿಕತೆ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಬಸವಣ್ಣನವರ ಕಾಯಕ, ದಾಸೋಹ, ಸಮಾನತೆ ಹಾಗೂ ಮಾನವೀಯತೆಯ ತತ್ವಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ. ಶರಣರ ಜೀವನ ಮೌಲ್ಯಗಳು, ಬಸವ ತತ್ವದ ಆದರ್ಶಗಳು ಹಾಗೂ ವಚನ ಸಾಹಿತ್ಯದ ಸಂದೇಶಗಳು ಪ್ರತಿಯೊಬ್ಬರ ಬದುಕಿಗೆ ದಾರಿದೀಪವಾಗಬೇಕು. ಬಸವ ತತ್ವದ ಮೂಲ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಬಸವಣ್ಣನವರು ಜಾತಿ, ವರ್ಗ, ಲಿಂಗ ಸೇರಿದಂತೆ ಯಾವುದೇ ಭೇದಭಾವಕ್ಕೆ ಅವಕಾಶ ನೀಡದೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಕಾಯಕವೇ ಕೈಲಾಸ ಎಂಬ ಸಂದೇಶದ ಮೂಲಕ ದುಡಿಮೆಯ ಗೌರವವನ್ನು ಸಾರಿದರು. ದಾಸೋಹದ ಮೂಲಕ ಸಮಾಜದ ಎಲ್ಲ ವರ್ಗದ ಜನರೊಂದಿಗೆ ಹಂಚಿಕೊಳ್ಳುವ ಮನೋಭಾವವನ್ನು ಬೆಳೆಸಿದರು. ಅವರ ವಚನಗಳಲ್ಲಿರುವ ಸಾಮಾಜಿಕ ಕಾಳಜಿ, ಮಾನವೀಯತೆ ಮತ್ತು ನೈತಿಕ ಮೌಲ್ಯಗಳು ಪ್ರತಿಯೊಬ್ಬರ ಜೀವನಕ್ಕೂ ಮಾರ್ಗದರ್ಶನ ನೀಡಬಲ್ಲವು ಎಂದು ಹೇಳಿದರು.

ಶ್ರಾವಣ ಮಾಸದ ಈ ಪವಿತ್ರ ಸಂದರ್ಭದಲ್ಲಿ ಬಸವಣ್ಣನವರ ಆದರ್ಶಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ, ಅವುಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ, ಸಮಾನತೆ, ಸೌಹಾರ್ದತೆ ಹಾಗೂ ಸಹೋದರತ್ವವನ್ನು ಬೆಳೆಸುವ ಮೂಲಕ ಬಸವ ತತ್ವದ ಆಶಯಗಳನ್ನು ಸಾಕಾರಗೊಳಿಸೋಣ ಎಂದು ಶಾಸಕ ಶಿವಾನಂದ ಪಾಟೀಲ್ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಾಧೀಶರು, ಗಣ್ಯರು, ಭಕ್ತರು ಹಾಗೂ ಶ್ರೀ ಬಸವೇಶ್ವರ ಜಾತ್ರಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ನಡೆದ ಪ್ರವಚನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಆಧ್ಯಾತ್ಮಿಕ ಸಂದೇಶಗಳನ್ನು ಆಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande