

ಬಳ್ಳಾರಿ, 14 ಆಗಸ್ಟ್ (ಹಿ.ಸ.):
ಆ್ಯಂಕರ್ : ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಆ.15 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಬಿಎಂಸಿಆರ್ಸಿ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ ಅವರು ಧ್ವಜಾರೋಹಣಾ ನೆರವೇರಿಸಿ ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸುವರು
ನಾಳೆ ಬೆಳಿಗ್ಗೆ 08 ಗಂಟೆಗೆ ಡಾ.ರಾಜ್ಕುಮಾರ್ ಉದ್ಯಾನವನದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಸಚಿವರು ಗೌರವ ಸಮರ್ಪಣೆ ಮಾಡುವರು.
ಸಂಸದರಾದ ಈ.ತುಕಾರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ ಲ್ಯೂಮ್ಸ್) ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕರಾದ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಗಣ್ಯರು ಪಾಲ್ಗೊಳ್ಳುವರು.
ನಾಳೆ ಬೆಳಿಗ್ಗೆ 10 ರಿಂದ ಬಿಎಂಸಿಆರ್ಸಿ ಮೈದಾನದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿವೆ.
ಬಳ್ಳಾರಿ ವಲಯ ಪೆÇಲೀಸ್ ಮಹಾನಿರೀಕ್ಷಕರಾದ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ- ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್