ಸಭಾಧ್ಯಕ್ಷರಾಗಿ ಆಯ್ಕೆಯಾದ ಜಿ ಎಸ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಅಭಿನಂದನೆ
ಬೆಂಗಳೂರು, 14 ಆಗಸ್ಟ್ (ಹಿ.ಸ.): ಆ್ಯಂಕರ್:ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್. ಪಾಟೀಲ್ ಅವರಿಗೆ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು. ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜಿ.ಎಸ್. ಪಾಟೀಲ್ ಅವರ ರಾಜಕೀಯ ಮತ್ತು ಸಾಮಾಜಿಕ ಸೇವೆಯನ್ನು ಸ್ಮರಿಸಿ ಶುಭ ಹಾ
ನೂತನ ಸಭಾಧ್ಯಕ್ಷರಿಗೆ ಅಭಿನಂದಿಸಿದ ಮುಖ್ಯಮಂತ್ರಿ


ಬೆಂಗಳೂರು, 14 ಆಗಸ್ಟ್ (ಹಿ.ಸ.):

ಆ್ಯಂಕರ್:ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಜಿ.ಎಸ್. ಪಾಟೀಲ್ ಅವರಿಗೆ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು. ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜಿ.ಎಸ್. ಪಾಟೀಲ್ ಅವರ ರಾಜಕೀಯ ಮತ್ತು ಸಾಮಾಜಿಕ ಸೇವೆಯನ್ನು ಸ್ಮರಿಸಿ ಶುಭ ಹಾರೈಸಿದರು.

ಮೊದಲಿಗೆ ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ, ಚುನಾವಣಾ ಪ್ರಕ್ರಿಯೆಗೆ ನೆರವಾದ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರಿಗೆ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿಧಾನಸಭೆಯನ್ನು ಹೊಸ ರೀತಿಯಲ್ಲಿ ನಡೆಸಲು ಪ್ರಯತ್ನಿಸಿದ ಮಾಜಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಕಾರ್ಯವೈಖರಿಯನ್ನೂ ಶ್ಲಾಘಿಸಿದರು.

ಜಿ.ಎಸ್. ಪಾಟೀಲ್ ಅವರ ಕುಟುಂಬದ ಸಮಾಜಸೇವೆಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಅವರ ಕುಟುಂಬ ಕೃಷಿ ಹಿನ್ನೆಲೆಯುಳ್ಳ ದೊಡ್ಡ ಕುಟುಂಬವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸಿದೆ ಎಂದರು. ಅವರ ಸಹೋದರರು ವಿಧಾನಸಭೆ, ಲೋಕಸಭೆ, ಸಹಕಾರ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿದರು.

“ನಮ್ಮ ಪಕ್ಷ ಜಿ.ಎಸ್. ಪಾಟೀಲ್ ಅವರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಕೂರಿಸಿಲ್ಲ; ಅಭ್ಯರ್ಥಿಯನ್ನಾಗಿ ಮಾತ್ರ ಘೋಷಿಸಿತ್ತು. ಸಭಾಧ್ಯಕ್ಷ ಸ್ಥಾನಕ್ಕೆ ಅಗೌರವ ನೀಡುವುದು ನಮ್ಮ ಉದ್ದೇಶವಲ್ಲ. ವಿರೋಧ ಪಕ್ಷದವರು ಚುನಾವಣೆಗೆ ಗೈರಾಗಿರುವುದು ಅವರ ರಾಜಕೀಯ ನಿಲುವು. ಆದರೂ ಅವರ ಗೈರುಹಾಜರಿಯ ಮೂಲಕವೂ ಆಯ್ಕೆಗೆ ಸಹಕರಿಸಿದ್ದಾರೆ. ಅವರ ಪರವಾಗಿಯೂ ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದರು.

1989ರಿಂದ ಎಂಟು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಜಿ.ಎಸ್. ಪಾಟೀಲ್ ಅವರು ವಿವಿಧ ನಿಗಮಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವುದನ್ನು ಮುಖ್ಯಮಂತ್ರಿ ಉಲ್ಲೇಖಿಸಿದರು. ಪಾಟೀಲ್ ಹಾಗೂ ಸಚಿವ ಎಚ್.ಕೆ. ಪಾಟೀಲ್ ಅವರ ಕ್ಷೇತ್ರಗಳಲ್ಲಿ ಕಂಡುಬಂದ ಶುದ್ಧ ಕುಡಿಯುವ ನೀರಿನ ಘಟಕಗಳ ಮಾದರಿಯನ್ನು ತಮ್ಮ ಕ್ಷೇತ್ರದಲ್ಲಿಯೂ ಅಳವಡಿಸಿಕೊಂಡಿರುವುದಾಗಿ ತಿಳಿಸಿದರು.

ವೀರಶೈವ ಸಮಾಜದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ತಾವು ರಂಭಾಪುರಿ ಶ್ರೀಗಳ ಬಳಿ ಕ್ಷಮೆ ಕೋರಿದ್ದನ್ನೂ ಮುಖ್ಯಮಂತ್ರಿ ಸ್ಮರಿಸಿದರು.

“ಸಭಾಧ್ಯಕ್ಷರಾಗಿ ನೀವು ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಕೇವಲ ಆಡಳಿತ ಪಕ್ಷದ ಸದಸ್ಯರನ್ನಷ್ಟೇ ಅಲ್ಲ, ವಿರೋಧ ಪಕ್ಷದವರ ಧ್ವನಿಯನ್ನೂ ಆಲಿಸಬೇಕು. ನೀವು ಎತ್ತರದ ಸ್ಥಾನದಲ್ಲಿದ್ದು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. 224 ಶಾಸಕರ ಪರವಾಗಿ ನಿಮಗೆ ಶುಭ ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande