ಜನರ ಅಹವಾಲು ಆಲಿಸಿದ ಶಾಸಕ ಆರ್.ಬಿ. ತಿಮ್ಮಾಪುರ: ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವ ಭರವಸೆ
ಬಾಗಲಕೋಟೆ, 14 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಆರ್.ಬಿ. ತಿಮ್ಮಾಪುರ ಅವರು ಇಂದು ಮುಧೋಳ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರನ್ನು ಖುದ್ದಾಗಿ ಭೇಟಿ ಮಾಡ
ಮೀಟ್


ಬಾಗಲಕೋಟೆ, 14 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ, ಅವುಗಳಿಗೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕ ಆರ್.ಬಿ. ತಿಮ್ಮಾಪುರ ಅವರು ಇಂದು ಮುಧೋಳ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರನ್ನು ಖುದ್ದಾಗಿ ಭೇಟಿ ಮಾಡಿ, ವಿವಿಧ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ಆಲಿಸಿದರು.

ತಮ್ಮನ್ನು ಭೇಟಿ ಮಾಡಲು ಆಗಮಿಸಿದ್ದ ಕ್ಷೇತ್ರದ ವಿವಿಧ ಭಾಗಗಳ ಸಾರ್ವಜನಿಕರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಶಾಸಕರು, ಅವರ ಮನವಿಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರ ಗಮನಕ್ಕೆ ತಂದಿದ್ದು, ಕಂದಾಯ, ಆಡಳಿತಾತ್ಮಕ ಹಾಗೂ ಸ್ಥಳೀಯ ಮಟ್ಟದ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್.ಬಿ. ತಿಮ್ಮಾಪುರ ಅವರು, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಪ್ರಮುಖ ಜವಾಬ್ದಾರಿಯಾಗಿದೆ. ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಯಾವುದೇ ಹಿಂಜರಿಕೆ ಅಗತ್ಯವಿಲ್ಲ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವುಗಳಿಗೆ ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಾಗುವುದು ಎಂದು ಹೇಳಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಕೇವಲ ಆಲಿಸುವುದಷ್ಟೇ ಅಲ್ಲದೆ, ಅವುಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚಿಸಲಾಗುವುದು. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜನರ ಸೇವೆಯೇ ನಮ್ಮ ಪ್ರಥಮ ಆದ್ಯತೆ ಎಂದು ಶಾಸಕ ತಿಮ್ಮಾಪುರ ಅವರು ತಿಳಿಸಿದರು.

ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಮುಂದುವರಿಸಲಾಗುವುದು.

ಜನಪ್ರತಿನಿಧಿಯಾಗಿ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ತಮ್ಮ ಕರ್ತವ್ಯವಾಗಿದ್ದು, ಜನರ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ (ವಕೀಲರು), ಪಕ್ಷದ ಪ್ರಮುಖ ಮುಖಂಡರಾದ ಸಂಜು ನಾಯಕ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande